ಕೆ.ಆರ್.ಪೇಟೆ,ಫೆ.03: ತಾಲ್ಲೂಕಿನ ಹೊಸಹೊಳಲು ಗ್ರಾಮದ ಮುಖಂಡರಾದ ವಿಜಯಕುಮಾರ್ ಅವರ ಧರ್ಮಪತ್ನಿ ಭಾರತಿವಿಜಯಕುಮಾರ್(45) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಅನಾರೋಗ್ಯದ ನಿಮಿತ್ತ ಕೆಲ ದಿನಗಳಿಂದ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಾರತೀ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.
ಮೃತರ ಪತಿ ವಿಜಯ್ಕುಮಾರ್ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರ ಕಚೇರಿಯಲ್ಲಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೃತರು ಪತಿ ವಿಜಯಕುಮಾರ್, ಒಬ್ಬ ಮಗ, ಓರ್ವ ಮಗಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಫೆ.04ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಹೊಸಹೊಳಲು ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಮೃತರ ನಿಧನಕ್ಕೆ ಶಾಸಕ ಹೆಚ್.ಟಿ ಮಂಜು, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವರದಿ: ಶ್ರೀನಿವಾಸ್ ಆರ್
==============================
