ಕೆ.ಆರ್.ಪೇಟೆ: ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ.ಮುಂದಿನ ಪೀಳಿಗೆಗೆ ಪ್ರಕೃತಿ ಸಂಪತ್ತನ್ನು ಉಳಿಸಿ ಬೆಳೆಸುವ ಕೆಲಸ ನಮ್ಮಿಂದ ಆಗಬೇಕು ಎಂದು ಅರಣ್ಯ ವಲಯ ಅರಣ್ಯಾಧಿಕಾರಿ ಅನಿತಾ ಹೇಳಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಕೆ.ಆರ್.ಪೇಟೆ ಅರಣ್ಯ ಪ್ರಾದೇಶಿಕ ವಲಯದ ವತಿಯಿಂದ ಪಟ್ಟಣದ ಕೃಷ್ಣ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಸಸಿ ನೆಟ್ಟು ಮಾತನಾಡಿದರು.
ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ.ಪರಿಸರದ ಸೌಂದರ್ಯವೂ ಹೆಚ್ಚಾಗಲಿದೆ.ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು.ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಇತರರಿಗೂ ಗಿಡ ನೆಡುವಂತೆ ಪ್ರೋತ್ಸಾಹಿಸಬೇಕು. ಇದು ಪರಿಸರವನ್ನು ಉಳಿಸುವ ಮಾರ್ಗ.ಪ್ರತಿಯೊಬ್ಬರೂ ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನು ಬಳಸಬೇಕು.ಮರುಬಳಕೆ ವಸ್ತುಗಳನ್ನು ಉಪಯೋಗಿಸುವುದರೊಂದಿಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಪರಿಸರದ ಬಗ್ಗೆ ಅರಿವಿದ್ದರೆ ಸಾಲದು. ಪ್ರಜ್ಞೆಯೂ ಬೇಕು, ಪ್ಲಾಸ್ಟಿಕ್ ಬಳಕೆ ಬೇಕು. ಆದರೆ ದುರ್ಬಳಕೆ ಬೇಡ.ನಾವು ಬದುಕುವ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಕೆ.ಆರ್.ಪೇಟೆ ಈ.ಓ ಸುಷ್ಮಾ ಮಾತನಾಡಿ ಪ್ರತಿಯೊಬ್ಬರೂ ಹುಟ್ಟಿದ ದಿನದಂದು ಗಿಡ ನೆಟ್ಟು ಪೋಷಿಸಬೇಕು. ಸಮಾರಂಭಗಳಲ್ಲಿ ಉಡುಗೊರೆಗಳ ಬದಲಾಗಿ ಗಿಡಗಳನ್ನು ನೀಡುವುದರಿಂದ ಪರಿಸರವನ್ನು ಉಳಿಸಬಹುದು. ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮರ-ಗಿಡಗಳನ್ನು ಪೋಷಿಸಿದರೆ, ನಮ್ಮ ವೈಯಕ್ತಿಕ ಆರೋಗ್ಯದ ಜೊತೆಗೆ ಪರಿಸರವೂ ಸಂರಕ್ಷಣೆ ಆಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ತಾ. ಪಂ,ಈ.ಓ ಸುಷ್ಮಾ, ಆರ್.ಎಫ್.ಓ ನಂದನ್ ಕುಮಾರ್, ಚೇತನ್ ಕೊಲೂರು, ಮಹೇಶ್ ಬಿ.ಎನ್,ಪ್ರಶಾಂತ್,ರವಿ, ಕೌಶಿಕ್, ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು,ಅರಣ್ಯ ರಕ್ಷಕರು ಭಾಗವಹಿಸಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
