ಕೆ.ಆರ್.ಪೇಟೆ: ಪೂಜ್ಯ ವೀರೇಂದ್ರ ಹೆಗಡೆ ಅಶೋತ್ತರಗಳನ್ನ ಮೈಗೂಡಿಸಿಕೊಂಡು ಪ್ರತಿಯೊಂದು ಕಾರ್ಯಕ್ರಮಗಳಿಗೂ ಸಹಕಾರಿಯಾಗುವ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ನಮ್ಮ ಯೋಜನೆಯ ಜಿಲ್ಲಾ ಜನಜಾಗೃತಿ ಅಧ್ಯಕ್ಷರಾಗಿರುವುದು ನಿಜಕ್ಕೂ ನಮಗೆ ಹೆಮ್ಮೆಯ ವಿಚಾರ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾಸಂಸ್ಥೆಯ ಜಿಲ್ಲಾ ನಿರ್ದೇಶಕ ಡಾ.ಯೋಗೇಶ್ ತಿಳಿಸಿದರು.
ಪಟ್ಟಣದ ಜೈನಗರ ಬಡಾವಣೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಶ್ರೀ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜೆ ಡಾ: ವೀರೇಂದ್ರ ಹೆಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಿಕ್ಕೇರಿ ಶ್ರೀ ಧರ್ಮಸ್ಥಳ ಸಂಸ್ಥೆ ಹರಿಹರಪುರ ವಲಯದ ವತಿಯಿಂದ ಹರಿಹರಪುರದಲ್ಲಿ ಏರ್ಪಡಿಸಿದ್ದ ಶ್ರೀ ಉಚಿತ ಆರೋಗ್ಯ ಕಣ್ಣಿನ ಶಿಬಿರದಲ್ಲಿ ಪಾಲ್ಗೊಂಡು ಶಸ್ತ್ರ ಚಿಕಿತ್ಸೆ ಪಡೆದುಕೊಂಡ ರೋಗಿಗಳಿಗೆ ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ರೋಗಿಗಳಿಗೆ ಉಚಿತ ಕಣ್ಣಿನ ಕನ್ನಡಕ ಹಾಗೂ ತಾಲೂಕಿನ ಹಲವು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವ-ಸಹಾಯ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರ ಆರ್ಥಿಕ ಸಬಲತೆ ಮತ್ತು ಸ್ವಾವಲಂಬನೆ ಜೀವನ ನಡೆಸಿಕೊಳ್ಳಲು ಪೂರಕವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾದರಿಯಾಗಿ ಕೆಲಸ ಮಾಡುತ್ತ.ಪೂಜ್ಯ ಕಾವಂದರಲ್ಲಿರುವ ದೂರ ದೃಷ್ಟಿ ಅವಿಸ್ಮರಣೀಯ ಏಕೆಂದರೆ ಗಾಂಧೀಜಿ ಕಂಡ ಕನಸನ್ನು ನನಸು ಮಾಡಿಸಲು ಪೂಜ್ಯರು ಸಂಸ್ಥೆಯ ಮೂಲಕ ಜನಸ್ನೇಹಿ ಯೋಜನೆಗಳು ಕೈಗೊಳ್ಳುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಪೂಜ್ಯರ ಆದರ್ಶಗಳನ್ನ ಮೈಗೂಡಿಸಿಕೊಂಡು ತಾಲೂಕಿನಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಸದೃಢ ಸಮಾಜಕ್ಕೆ ಶ್ರಮಿಸುತ್ತಿರುವ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ನಮ್ಮ ಶ್ರೀ ಧರ್ಮಸ್ಥಳ ಸಂಸ್ಥೆಯ ಒಳಪಟ್ಟಂತಹ ಚನ್ನರಾಯಪಟ್ಟಣ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾಗಿರುವುದು ನಮಗೆ ನಿಜಕ್ಕೂ ಸಂತಸ ತಂದಿದೆ ಪ್ರಸ್ತುತ ದಿನಮಾನಗಳಲ್ಲಿ ಸ್ವಾರ್ಥಕ್ಕೆ ಚಿಂತಿಸುವ ಸ್ವಾರ್ಥಿಗಳ ನಡುವೆ ಸದೃಢ ಸಮಾಜಕ್ಕಾಗಿ ಹಗಲು ಇರುಳು ಶ್ರಮಿಸುತ್ತಿರುವ ಸಮಾಜ ಸೇವಕ ಆರ್ಟಿಓ ಮಲ್ಲಿಕಾರ್ಜುನ್ ರವರಿಗೆ ಮುಂದಿನ ದಿನಮಾನಗಳಲ್ಲಿ ಮತ್ತಷ್ಟು ಉನ್ನತ ಸ್ಥಾನ ದೊರಕಬೇಕು ಎಂದು ತಿಳಿಸಿದರು.
ಬಳಿಕ ರೋಗಿಗಳಿಗೆ ಉಚಿತ ಕನ್ನಡಕ ಹಾಗೂ ಹಲವು ದೇವಸ್ಥಾನಕ್ಕೆ ಚೆಕ್ ವಿತರಿಸಿ ಮಾತನಾಡಿದ ಶ್ರೀ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಆರ್ಟಿಓ ಮಲ್ಲಿಕಾರ್ಜುನ್ ರವರು ಧರ್ಮಸ್ಥಳ ಯೋಜನೆಯ ಮೂಲಕ ಸ್ತ್ರೀಯರ ಸಬಲೀಕರಣ, ಶಿಕ್ಷಣಕ್ಕೆ ಸಹಕಾರಿಯಾಗಿ, ಗ್ರಾಮೀಣ ಭಾಗದ ರೈತರ ಜೀವನಾಡಿಯಾಗಿರುವ ಕೆರೆಗಳ ಅಭಿವೃದ್ಧಿ ಪಡಿಸಿ,ನಿರ್ಗತಕರಿಗೆ ಮನೆ ಮಾಸಾಸನ ಸೇರಿದಂತೆ ಹಲವು ಯೋಜನೆಗಳ ಅನುಷ್ಠಾನಗೊಳಿಸಿ ಸದೃಢ ಸಮಾಜಕ್ಕಾಗಿ ಶ್ರಮ ವಹಿಸುತ್ತಿರುವ ಪೂಜ್ಯ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಆಶಯದಂತೆ ಏರ್ಪಡಿಸಿದ್ದ ಉಚಿತ ಕಣ್ಣಿನ ಶಿಬಿರದಲ್ಲಿ ಪಾಲ್ಗೊಂಡು ಶಾಸ್ತ್ರಚಿಕಿತ್ಸೆಗೆ ಪಡೆದುಕೊಂಡ ರೋಗಿಗಳಿಗೆ ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಕನ್ನಡಕ ವಿತರಿಸಿದ್ದೇವೆ ಅವರ ಆದರ್ಶ,ಆಲೋಚನೆ ನಮಗೆಲ್ಲರಿಗೂ ಸ್ಪೂರ್ತಿದಾಯಕ ಎಂದು ತಿಳಿಸಿದ ಅವರು.ಅಕ್ಕಿಹೆಬ್ಬಾಳು ಗ್ರಾಮದ ಹೇಮಾವತಿ ಹೊನ್ನಾರು ವೇದಿಕೆ, ಸಾಕ್ಷಿಬೀಡು ಗ್ರಾಮದ ಶ್ರೀ ಲಕ್ಷ್ಮಿದೇವಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್, ಬೂಕನಕೆರೆ ಹೋಬಳಿಯ ಅಟ್ಟುಪ್ಪೆ ಗ್ರಾಮದ ಶ್ರೀ ಮಾರಮ್ಮ ದೇವಸ್ಥಾನ ಹಾಗೂ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ತಲಾ 50,000 ರೂಪಾಯಿಗಳ ಸಹಾಯ ಧನದ ಚೆಕ್ಕುಗಳನ್ನು ವಿತರಿಸಿದರು. ಮಂಡ್ಯ ಜಿಲ್ಲಾ ಕಿವುಡರ ಸಂಘ ಅನಾರೋಗ್ಯದಿಂದ ಬಳಲುತ್ತಿರುವ ಗಂಜಿಗೆರೆ ಮಂಜೇಗೌಡ ಹೊಸಹೊಳಲು ಜಯಲಕ್ಷ್ಮಿ ದೊಡ್ಡಯಾಚನೆಹಳ್ಳಿ ಸೋಮಶೇಖರ್ ಹಾಗೂ ಬಿಹಾರದಲ್ಲೇ ನಡೆಯುತ್ತಿರುವ ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟದಲ್ಲಿ ಭಾಗವಹಿಸಿದ ಆಲಂಬಾಡಿ ಕಾವಲು ಗ್ರಾಮದ ವಿದ್ಯಾರ್ಥಿಗಳಾದ ಪ್ರೀತಂ ಮತ್ತು ಅಜಯ್ ಅವರಿಗೆ ಆರ್ಥಿಕ ಸಹಾಯ ನೀಡಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಗೌರವಿಸಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಜನಜಾಗೃತಿ ವೇದಿಕೆಯ ಚನ್ನರಾಯಪಟ್ಟಣ ಜಿಲ್ಲಾ ಉಪಾಧ್ಯಕ್ಷರಾದ ನಳಿನಾ, ನಿರ್ದೇಶಕರಾದ ಅಕ್ಕಿಹೆಬ್ಬಾಳು ರಘು, ಮೊಟ್ಟೆ ಮಂಜು , ಸುನಿತಾ ದಯಾನಂದ್, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣ ತಿಲಕ್, ಕೆ.ಆರ್.ನೀಲಕಂಠ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಗಳಾದ ತಿಲಕರಾಜ್, ಪ್ರಸಾದ್, ಮೇಲ್ವಿಚಾರಕರಾದ ಸಂಗೀತ ದಿನೇಶ್, ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಟ್ರಸ್ಟಿ ಗಂಜಿಗೆರೆ ಮಹೇಶ್, ಅಕ್ಕಿಹೆಬ್ಬಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ವಾಸುರಾಜೇಗೌಡ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಎನ್.ಪ್ರವೀಣ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭುದೇವೆಗೌಡ ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
