ಕೆ.ಆರ್.ಪೇಟೆ, ಜೂ.12: ತಾಲ್ಲೂಕಿನ ಕಸಬಾ ಹೋಬಳಿಯ ಅಗ್ರಹಾರಬಾಚಹಳ್ಳಿ ಗ್ರಾಮದ ನಿವಾಸಿ ಗೌರಮ್ಮ (70) ಅವರು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು.
ಮೃತರು ಪತಿ ದೇವೇಗೌಡ, ಪುತ್ರರಾದ ನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಡಿ. ಬೋರೇಗೌಡ, ರೈತರಾದ ಮಂಜೇಗೌಡ ಹಾಗೂ ಬಿ. ಬೋರೇಗೌಡ, ಪುತ್ರಿ ಬಿ. ಲತಾ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಜೂನ್ 12ರಂದು ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಅಗ್ರಹಾರಬಾಚಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಗೌರಮ್ಮ ಅವರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಅಗ್ರಹಾರಬಾಚಹಳ್ಳಿ ಗ್ರಾಮದ ಗ್ರಾಮಸ್ಥರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.
-ಶ್ರೀನಿವಾಸ್ ಆರ್.
