ಕೆ.ಆರ್.ಪೇಟೆ : ಖಾಸಗಿ ಶಾಲೆಗಳಲ್ಲಿ ಓದಿದರೆ ಮಾತ್ರ ಮಕ್ಕಳು ದೊಡ್ಡವರಾಗುತ್ತಾರೆಂಬ ಭ್ರಮೆಯಿಂದ ಪೋಷಕರು ಹೊರ ಬಂದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಹೇಳಿದರು.
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಹೆರಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾಸಿರಿ ಹಾಗೂ 60ನೇ ವರ್ಷದ ಶಾಲಾ ವಜ್ರಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿದ್ದಾರೆ ಸರ್ಕಾರಿ ಶಾಲೆಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತವೆ.ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಚೆನ್ನಾಗಿ ಕಲಿತು ಅತ್ಯುನ್ನತ ಸ್ಥಾನಗಳನ್ನು ಪಡೆಯಬೇಕು ಆ ಮೂಲಕ ನಾಡಿಗೆ ಕೊಡುಗೆಯನ್ನು ನೀಡಬೇಕು ಎಂದ ಅವರು ಗ್ರಾಮಸ್ಥರುಗಳು, ಯುವಕರು, ಮುಖಂಡರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆಯನ್ನು ನೀಡತ್ತ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯು ಅನಾವರಣಗೊಳ್ಳಲು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ.ಅವುಗಳ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುವಂತಹ ಕೆಲಸವನ್ನು ಮಾಡಬೇಕು ಜೊತೆಗೆ ಒಳ್ಳೆಯ ಸಂಸ್ಕಾರವನ್ನು ಕಲಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಕೆಲಸ ಮಾಡಬೇಕು ಎಂದರು.

ಕಸಾಪ ತಾಲೂಕ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿ ಪ್ರಸಕ್ತ ಕಾಲಮಾನದಲ್ಲಿ ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್, ಟಿವಿ ಯನ್ನು ವೀಕ್ಷಣೆ ಮಾಡಲು ಸಮಯವನ್ನು ವ್ಯರ್ಥ ಮಾಡುತ್ತಾರೆ, ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ ಆದರೆ ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳಬೇಕು ಎಂದು ಹೇಳಿದರು

ನಂತರ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಸ್ ಧರ್ಮಪ್ಪ ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದರಿಂದ ಬುದ್ದಿಶಕ್ತಿ ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಮನರಂಜನೆಗಳಲ್ಲಿ ಭಾಗವಹಿಸುವುದರಿಂದ ನಷ್ಟವಾಗುವುದಿಲ್ಲ ಇದಕ್ಕೆ ಪೋಷಕರ ಸಹಮತವೂ ಇರಬೇಕಿದೆ, ಮಕ್ಕಳಿಗೆ ಓದುವ ಸ್ಪರ್ಧೆಗಿಂತ ಸಮಾಜವನ್ನು ಎದುರಿಸಲು ಬೇಕಾದ ಜಾಣ್ಮ, ಸಾಮರ್ಥ್ಯವನ್ನು ನೀಡಬೇಕು.
ಜೀವನದ ಕಲೆಯನ್ನು ಅನುಭವಿಸಲು ಸಾಧ್ಯವಾಗುವಂತ ಮೌಲ್ಯಗಳನ್ನು ನೀಡುವುದು ಅವಶ್ಯಕ ಎಂದ ಅವರು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆ ನೀಡಿಬೇಕು ವಿಗೆ ಮನುಷ್ಯನನ್ನು ಬಾಳಿ ಬೆಳಸುತ್ತದೆ ಎಂದರು.
ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಡಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ತಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ಶಿಕ್ಷಕರುಗಳಿಗೆ ಗುರು ವಂದನೆ ಸಲ್ಲಿಸಿದರು ಬಳಿಕ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ, ಅಧಿಕಾರಿಗಳು, ಶಿಕ್ಷಕರುಗಳು ಹಾಗೂ ಗಣ್ಯರುಗಳನ್ನ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯ ಪ್ರಶಾಂತ್,ಆರಾಧ ಕಮಿಟಿ ಸದಸ್ಯ ಕಾಶಿ ಮುರಕನಹಳ್ಳಿ ಪ್ರೀತಮ್,ಕೆ.ಆರ್.ಪೇಟೆ ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ,ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಪದ್ಮೇಶ್,ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮಪ್ಪ, ಶಿಕ್ಷಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ. ಕೆ ದೇವರಾಜು,ಹಿರಿಯ ಮುಖಂಡ ಸಣ್ಣಸ್ವಾಮಿಗೌಡ,ಹಿರಿಯ ವಿದ್ಯಾರ್ಥಿ ಭಾಸ್ಕರ್, ಗುತ್ತಿಗೆದಾರ ರವೀಶ್ ಹೆಚ್.ಎಸ್,ಸಿ.ಆರ್ ಪಿ,ನಂದೀಶ್,ಶಿಕ್ಷಕಿ ಕುಸುಮ,ಸದಾಶಿವ,ಶಿಕ್ಷಕರಾದ ಸಿ.ಟಿ ಲಕ್ಷ್ಮಣ್, ಗುಡುಗನಹಳ್ಳಿ ಮಂಜುನಾಥ್,ಈ.ಸಿ.ಓ ಸುರೇಶ್,ಆರ್ ಟಿ ಓ ಮಲ್ಲಿಕಾರ್ಜುನ್ ಆಪ್ತ ಸಹಾಯಕ ಗಂಜಿಗೆರೆ ಮಹೇಶ್ ಶಾಲಾ ಮುಖ್ಯ ಶಿಕ್ಷಕ ಸತೀಶ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
