ಕೆ.ಆರ್.ಪೇಟೆ,ಅ.07: ರಾಮಾಯಣ ಮಹಾಕಾವ್ಯದ ಮೊದಲ ಕವಿಯಾಗಿರುವ ಕಾರಣ ವಾಲ್ಮೀಕಿ ಅವರನ್ನು ಆದಿ ಕವಿ ಎಂದು ಕರೆಯುತ್ತೇವೆ. ರಾಮಾಯಣ ಮತ್ತು ಮಹಾಭಾರತ ಕಾವ್ಯಗಳಲ್ಲಿ ಬರುವ ಪಾತ್ರಗಳು ಮನುಷ್ಯ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬ ಸಂದೇಶವನ್ನು ತಿಳಿಸಿಕೊಡುತ್ತವೆ. ಹಾಗಾಗಿ ರಾಮಾಯಣ ಮತ್ತು ಮಹಾಭಾರತದಲ್ಲಿ ಬರುವ ಒಳ್ಳೆಯ ಸಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕು ಎಂದು ಕ್ಷೇತ್ರದ ಶಾಸಕರಾದ ಹೆಚ್.ಟಿ.ಮಂಜು ಹೇಳಿದರು.

ಅವರು ಕೆ.ಆರ್.ಪೇಟೆ ಪಟ್ಟಣದ ಶತಮಾನದ ಶಾಲಾ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಶ್ವಯುಜ ಶುದ್ದ ಹುಣ್ಣಿಮೆ ದಿನವನ್ನು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ವಾಲ್ಮೀಕಿ ರಾಮಾಯಣ ಮಹಾಕಾವ್ಯವು 24ಸಾವಿರ ಶ್ಲೋಕಗಳನ್ನು ಹೊಂದಿದೆ. ವಾಲ್ಮೀಕಿ ಮಹರ್ಷಿಗಳು ತಮ್ಮ ರಾಮಾಯಣ ಮಹಾಕಾವ್ಯದಲ್ಲಿ ಶ್ರೀರಾಮನ ಆದರ್ಶಗಳ ಗುಣಗಳು, ರಾವಣನ ದುರಾಸೆಯ ಗುಣಗಳನ್ನು ಬಹಳ ಚನ್ನಾಗಿ ಚಿತ್ರಿಸಿದ್ದಾರೆ. ವಾಲ್ಮೀಕಿ ಮಹಾಕಾವ್ಯವನ್ನು ಸಂಸ್ಕೃತದಲ್ಲಿ ಬರೆದಿದ್ದಾರೆ. ಅನೇಕ ಸಾಹಿತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ವಾಲ್ಮೀಕಿಯವರ ರಾಮಾಯಣ ಕಾವ್ಯವು ನಮಗೆ ಉತ್ತಮ ಬದುಕಿನ ಸನ್ಮಾರ್ಗವನ್ನು ತೋರಿಸಿಕೊಡುತ್ತದೆ. ಶ್ರೀರಾಮನಂತೆ ಬದುಕಿದೆ ಸಮಾಜದಲ್ಲಿ ಅತ್ಯುತ್ತುಮ ವ್ಯಕ್ತಿಯಾಗಿ ಜೀವನ ನಡೆಸಬಹುದು. ರಾವಣನಂತೆ ಬದುಕಬಾರದು ಎಂಬ ಸಂದೇಶವು ನಮಗೆ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ರಾಮಾಯಣ ಮತ್ತು ಮಹಾಭಾರತ ಮಹಾಕಾವ್ಯಗಳನ್ನು ಓದುವ ಮೂಲಕ ಎರಡೂ ಮಹಾಕಾವ್ಯಗಳಲ್ಲಿ ಒಳ್ಳೆಯ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಾವೂ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುವ ಜೊತೆಗೆ ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಶಾಸಕ ಹೆಚ್.ಟಿ.ಮಂಜು ಅವರು ತಿಳಿಸಿದರು.

ಮಂಡ್ಯ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಎಸ್.ಪ್ರೇಮಕುಮಾರ್ ಪ್ರಧಾನ ಉಪನ್ಯಾಸ ನೀಡಿದರು. ವಾಲ್ಮೀಕಿ ಮಹರ್ಷಿಗಳ ಬಗ್ಗೆ ಸಂಕ್ಷಿಪ್ತವಾಗಿ ಸಮಗ್ರ ಮಾಹಿತಿ ತಿಳಿಸಿಕೊಟ್ಟರು.
ಇದನ್ನು ಓದಿ: ಕೆ.ಆರ್.ಪೇಟೆ: ಶಿಕ್ಷಣ ಇಲಾಖೆಯ ನಿವೃತ್ತ ಶಾಲಾ ತನಿಖಾಧಿಕಾರಿ ದಿ.ಬಿ.ಸಿ.ಚನ್ನೇಗೌಡರ ಧರ್ಮಪತ್ನಿ ಜಯಮ್ಮ(74) ನಿಧನ!
ಪುರಸಭಾ ಅಧ್ಯಕ್ಷೆ ಪಂಕಜಾ ಪ್ರಕಾಶ್ ಅವರು ಪ್ರವಾಸಿ ಮಂದಿರದಿಂದ ವೇದಿಕೆಯವರೆಗೆ ಹೊರಟ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಪಂಕಜಾ ಪ್ರಕಾಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಸದಸ್ಯರಾದ ಡಿ.ಪ್ರೇಮಕುಮಾರ್, ನಟರಾಜ್, ಮಹಾದೇವಿ ನಂಜು0ಡ, ತಾಲ್ಲೂಕು ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಅಕ್ಕಿಹೆಬ್ಬಾಳು ಎ.ಆರ್.ರಘು, ತಾ.ಪಂ.ಮಾಜಿ ಅಧ್ಯಕ್ಷ ಜಯರಂಗ, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್, ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಆರ್.ಜಗದೀಶ್, ತಾಲ್ಲೂಕು ನಾಯಕರ ಸಂಘದ ಕಾರ್ಯದರ್ಶಿ ಜಿ.ಪಿ.ರಾಜು, ಕೆ.ಎಸ್.ರಾಜು, ಜಿ.ಪಂ.ಮಾಜಿ ಉಪಾಧ್ಯಕ್ಷೆ ಗಾಯಿತ್ರಿರೇವಣ್ಣ, ರಾಮದಾಸ್, ಟಿಎಪಿಸಿಎಂಎಸ್ ನಿರ್ದೇಶಕರಾದ ಮಂಜುನಾಥ್, ಕಾಯಿಮಜಂಣ್ಣ, ತಾ.ಪಂ.ಮಾಜಿ ಅಧ್ಯಕ್ಷೆ ಜಯಲಕ್ಷ್ಮೀ ಸ್ವಾಮಿನಾಯಕ್, ಶಿಕ್ಷಣಾಧಿಕಾರಿ ವೈ.ಎನ್.ತಿಮ್ಮೇಗೌಡ, ತಾ.ಪಂ.ಇಓ ಸುಷ್ಮ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ದಿವಾಕರ್, ಕ್ಷೇತ್ರ ಪುರಸಭಾ ಮುಖ್ಯಾಧಿಕಾರಿ ಅಶೋಕ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ.ಸಿ.ಎನ್.ಯತೀಶ್, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್, ಸಿಡಿಪಿಓ ವಿದ್ಯಾವತಿ, ಶಾಂತವ್ವ.ಎಸ್.ಹಾವಣ್ಣನವರ್, ಸಿಪಿಐ ಸುಮಾರಾಣಿ, ಶಿಕ್ಷಣ ಸಂಯೋಜಕ ಕೃಷ್ಣನಾಯಕ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಹಲವು ಅಧಿಕಾರಿಗಳ ಗೈರು ಗರಂ ವಾಲ್ಮೀಕಿ ಜಯಂತಿಗೆ ಸಾಕಷ್ಟು ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ವಾಲ್ಮೀಕಿ ಜಯಂತಿಗೂ ನಮಗೂ ಸಂಬಂಧವಿಲ್ಲ ಎಂಬಂತೆ ನಡೆದುಕೊಂಡಿರುವ ಬಗ್ಗೆ ವಾಲ್ಮೀಕ ಸಮಾಜದ ಮುಖಂಡರು ಅಸಮಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಎಂ.ಬಿ.ಎಸ್.ಎಸ್, ಇಂಜಿನಿಯರಿಂಗ್ ಪದವಿಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ಫ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಪ್ರವಾಸಿ ಮಂದಿರದಿಂದ ಶತಮಾನದ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವೇದಿಕೆಯವರೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು.

[…] […]