ಕೆ.ಆರ್.ಪೇಟೆ, ಮೇ 21 – ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರ ಹುಟ್ಟುಹಬ್ಬದ ಅಂಗವಾಗಿ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಆವರಣದಲ್ಲಿ neನೆ ನಡೆದ ಪ್ರತಿಭಾ ಪುರಸ್ಕಾರ, ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರವು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮ ಪವಿತ್ರ ಶ್ರೀಗಳು ಹಾಗೂ ಗುರು ಹಿರಿಯರ ಆಶೀರ್ವಾದದಿಂದ ಹಾಗೂ ಅಪಾರ ಭಕ್ತರ ಸಹಕಾರದಿಂದ ಯಶಸ್ವಿಯಾಗಿ ನೆರವೇರಿತು.
ಪೂಜ್ಯ ಶ್ರೀಗಳ ಆಶೀರ್ವಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ
ಕಾರ್ಯಕ್ರಮಕ್ಕೆ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಡಾ. ಶಿವಾನಂದಪುರಿ ಸ್ವಾಮೀಜಿ, ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಸ್ವತಂತ್ರ ಚನ್ನವೀರಯ್ಯ ಮಹಾಸ್ವಾಮೀಜಿ ಹಾಗೂ ಶಿವಬಸವ ಸ್ವಾಮೀಜಿಗಳು ಆಶೀರ್ವಾದಮಾಡಿ ಚಾಲನೆ ನೀಡಿದರು.
ಸಾಮಾಜಿಕ ಮುಖಂಡರು ಮತ್ತು ಗಣ್ಯರ ಸಾನ್ನಿಧ್ಯ
ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ಶ್ರೀ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, ಶಾಖಾಮಠದ ಕಾರ್ಯದರ್ಶಿ ಡಾ. ಜೆ.ಎನ್. ರಾಮಕೃಷ್ಣಗೌಡ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಬಿ.ಎಲ್. ದೇವರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮನ್ಮೂಲ್ ನಿರ್ದೇಶಕ ಡಾಲು ರವಿ, ಮಾಜಿ ಜಿ.ಪಂ ಉಪಾಧ್ಯಕ್ಷ ಎಸ್. ಅಂಬರೀಶ್, ಮಾಜಿ ತಾ.ಪಂ ಅಧ್ಯಕ್ಷ ಕಿಕ್ಕೇರಿ ಸುರೇಶ್, ಹಿರಿಯ ಮುಖಂಡರು ಬಿ. ನಂಜಪ್ಪ, ಬಿ.ಎನ್. ಕಿರಣ್, ಡಿ.ದೇವರಾಜು ಅರಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ.ಆರ್. ನಟರಾಜ್, ಮಂಡ್ಯ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ, ಸಾರಿಗೆ ಇಲಾಖೆಯ ಸಿ.ಟಿ. ಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ್, ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೇಶ್, ತಾ.ಯೋಜನಾಧಿಕಾರಿ ತಿಲಕ್ ಹಾಗೂ ಹಲವಾರು ಗಣ್ಯರು ಭಾಗವಹಿಸಿದ್ದರು.
ಆರೋಗ್ಯ ಶಿಬಿರ, ರಕ್ತದಾನ, ವಿದ್ಯಾರ್ಥಿಗಳಿಗೆ ಸನ್ಮಾನ
ಧರ್ಮೇಂದ್ರ ಮತ್ತು ಸೋಮಶೇಖರ್ ನೇತೃತ್ವದಲ್ಲಿ ನಡೆದ ಬೃಹತ್ ಆರೋಗ್ಯ ಶಿಬಿರದಲ್ಲಿ BGS ಆಸ್ಪತ್ರೆ ಸೇರಿದಂತೆ ರಾಜ್ಯದ ಪ್ರಮುಖ ಆಸ್ಪತ್ರೆಗಳ ವೈದ್ಯರು ಸೇವೆ ಸಲ್ಲಿಸಿ, ಸುಮಾರು 3,000 ಜನರನ್ನು ತಪಾಸಣೆ ಮಾಡಿದರು. ಅವರಲ್ಲಿ 250 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಯಿತು. ಶಿಬಿರದಲ್ಲಿ 100ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಸ್ಥಳದಲ್ಲಿಯೇ ಔಷಧ ವಿತರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತಾಲ್ಲೂಕಿನ 415 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ಟ್ರಸ್ಟಿನಿಂದ ಧನ್ಯವಾದ
ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿನ ಟ್ರಸ್ಟಿ ಗಂಜೀಗೆರೆ ಮಹೇಶ್ ಮಾತನಾಡಿ, “ಪೂಜ್ಯ ಶ್ರೀಗಳು, ಹಿರಿಯರು, ಸಮಾಜಸೇವಕರು ಮತ್ತು ಅಭಿಮಾನಿಗಳ ಆಶೀರ್ವಾದದಿಂದ ಹಾಗೂ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಸಹಕರಿಸಿದ ಎಲ್ಲರಿಗೂ ಟ್ರಸ್ಟಿನ ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಸಪಾ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್, ಪುರಸಭೆ ಮಾಜಿ ಸದಸ್ಯ ಕೆ.ಆರ್. ನೀಲಕಂಠ, ಶಿಕ್ಷಕರಾದ ಸಂಣ್ಣೆಗೌಡ, ದೇವರಾಜು, ತಮ್ಮೆಗೌಡ ಹಾಗೂ ಇನ್ನೂ ಅನೇಕರು ಭಾಗವಹಿಸಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್. ಪೇಟೆ
