ರಾಜ್ಯದ ಖಾಸಗಿ ನ್ಯೂಸ್ ವಾಹಿನಿಯೊಂದು 2025ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರ ಸಮ್ಮುಖದಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರನ್ನು ಕರ್ನಾಟಕ ಐಡಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೆ.ಆರ್.ಪೇಟೆ ತಾಲೂಕಿನಾದ್ಯಂತ ಸಮಾಜ ಸೇವೆಗೆ ಹೆಸರಾಗಿರುವ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರ ಸಮಾಜ ಸೇವೆಯನ್ನು ಪರಿಗಣಿಸಿ ಖಾಸಗಿ ವಾಹಿನಿ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರಿಗೆ ಕರ್ನಾಟಕ ಐಡಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಬೈರತಿ ಬಸವರಾಜ್,ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಸಚಿವ ಹಾಗೂ ಶಾಸಕರಾದ ಟಿ.ಬಿ ಜಯಚಂದ್ರ,ಶಾಸಕ ಪೊನ್ನಣ್ಣ,ಕನ್ನಡ ಚಲನಚಿತ್ರ ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಅನು ಪ್ರಭಾಕರ್, ವಾಹಿನಿಯ ಮುಖ್ಯಸ್ಥರು ಸೇರಿದಂತೆ ಉಪಸ್ಥಿತರಿದ್ದರು
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
