ಕೆ.ಆರ್.ಪೇಟೆ: ಪಟ್ಟಣದಲ್ಲಿರುವ ತಾಲ್ಲೂಕು ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರನ್ನಾಗಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎಂ.ಆರ್.ನಾಗೇಗೌಡ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ. ನೂತನವಾಗಿ ಅಪರ ಸರ್ಕಾರಿ ವಕೀಲರಾಗಿ ನೇಮಕಗೊಂಡಿರುವ ಎಂ.ಆರ್.ನಾಗೇಗೌಡ ಅವರನ್ನು ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರು, ಕಿರಿಯ ವಕೀಲ ಮಿತ್ರರು ಅಭಿನಂದಿಸಿದ್ದಾರೆ.
