ಕೆ.ಆರ್.ಪೇಟೆ : ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬವಾಗಿದ್ದು, ಜನಸಾಮಾನ್ಯರು ನಾಟಕದಲ್ಲಿ ಬರುವ ಉತ್ತಮ ಪಾತ್ರಧಾರಿಗಳ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕು ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಹೆಮ್ಮನಹಳ್ಳಿ ಗ್ರಾಮದ ಶ್ರೀ ರಾಮಾಂಜನೇಯ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಏರ್ಪಡಿಸಿದ್ದ ಕುರುಕ್ಷೇತ್ರ ಪೌರಾಣಿಕ ನಾಟಕದ ವೇದಿಕೆಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಲಾವಿದರ ಕುರಿತು ಮಾತನಾಡಿದರು.
ಸಮಾಜದಲ್ಲಿ ಹೆಚ್ಚಾಗುತ್ತಿರುವ ಆಧುನಿಕತೆಯಲ್ಲಿ ನಾಡಿನ ವೈಭವ ಮತ್ತು ಇತಿಹಾಸವನ್ನು ತಿಳಿಸುವಂತಹ ಕಲೆ,ಸಾಹಿತ್ಯ, ಸಂಸ್ಕೃತಿ, ಪರಂಪರೆ ಕಣ್ಮರೆಯಾಗುತ್ತಿದೆ.ಇಂಥ ಸಂದರ್ಭದಲ್ಲಿ ಹೆಮ್ಮನಹಳ್ಳಿ ಗ್ರಾಮದಲ್ಲಿ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕ ನೋಡಲು ಆಗಮಿಸಿರುವ ಜನಸಾಗರ ಕಂಡು ನಿಜಕ್ಕೂ ಸಂತಸ ತಂದಿದೆ.ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿದ್ದು, ಜನಸಾಮಾನ್ಯರು ನಾಟಕದಲ್ಲಿ ಬರುವ ಉತ್ತಮವಾದ ಪಾತ್ರಧಾರಿಗಳ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.
ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ ಹಾಗೂ ದೃಶ್ಯಮಾಧ್ಯಮಗಳ ಹಾವಳಿಯಿಂದಾಗಿ ಜಾನಪದ ಕಲೆಗಳು ದಿನದಿಂದ ದಿನಕ್ಕೆ ತೆರೆಮರೆಗೆ ಸರಿಯುತ್ತಿವೆ.ಪೌರಾಣಿಕ ಹಾಗೂ ಜಾನಪದದ ಕಣಜಗಳಾಗಿರುವ ಗ್ರಾಮೀಣ ಪ್ರದೇಶಗಳಲ್ಲಿನ ಕಲಾವಿದರನ್ನು ಗುರಿತಿಸುವ ಕೆಲಸವನ್ನು ಮಾಡಬೇಕಿದೆ.ಇಂತಹ ಕಲೆಗಳನ್ನು ಉಳಿಸಿ, ಪೋಷಣೆ ಮಾಡಿ ಮುಂದಿನ ಪೀಳಿಗೆಗೆ ಇವುಗಳ ಮಹತ್ವವನ್ನು ತಿಳಿಸಿಕೊಡುವ ಹೊಣೆಗಾರಿಕೆ ಪ್ರತಿಯೊಂದು ಸಂಘ ಸಂಸ್ಥೆಗಳು ಮಾಡಬೇಕು ಎಂದರು.
ಈ ಸಂದರ್ಭದಲ್ಲಿಕಾಂಗ್ರೆಸ್ ಮುಖಂಡ ಕೆ.ಬಿ ರವಿಕುಮಾರ್ ಹಿರಿಯ ಮುಖಂಡ ಗಂಗೆಗೌಡ,ಪರಮೇಶ್, ಗ್ರಾ.ಪಂ ಮಾಜಿ ಅಧ್ಯಕ್ಷ ಸತೀಶ್,ಗ್ರಾ.ಪಂ ಸದಸ್ಯ ಜಗದೀಶ್,ಗ್ರಾ.ಪಂ ಸದಸ್ಯೆ ಪುಷ್ಪತಮಣ್ಣ,ಮುಖಂಡ ಹೆಚ್.ಜಿ ರವಿ,ತಮ್ಮಣ್ಣ,ಶಿಕ್ಷಕ ಕಟ್ಟೆ ಮಹೇಶ್,ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ಗಂಜಿಗೆರೆ ಮಹೇಶ್, ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ.
