ಕೆ.ಆರ್.ಪೇಟೆ,ಅ.29: ರಾಷ್ಟೀಯ ಹಬ್ಬಗಳು, ನಾಡಹಬ್ಬಗಳು ಹಾಗೂ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಸರ್ಕಾರಿ ಅಧಿಕಾರಿಗಳು, ಕೆಳ ಹಂತದ ಅಧಿಕಾರಿಗಳು, ಸಿಬ್ಬಂಧಿ ವರ್ಗ, ಜನಪ್ರತಿನಿಧಿಗಳು, ರಾಜಕೀಯ ಪಕ್ಷದ ಮುಖಂಡರುಗಳು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕ ಬಂಧುಗಳ ಭಾಗವಹಿಸುವಿಕೆಯಿಂದ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ಹಾಗೂ ಅರ್ಥ ಬರುತ್ತದೆ ಎಂದು ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಅವರು ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಕರೆಯಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ನಾಡಿನ ವಿಶ್ವಮಾನವರ ಜಯಂತಿಯನ್ನು ಆಚರಣೆ ಮಾಡುವ ಮೂಲಕ ಇಂದಿನ ಪೀಳಿಗೆಗೆ ಅವರ ಆದರ್ಶಗಳು ಆಚಾರ ವಿಚಾರಗಳನ್ನು ಪರಿಚಯಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ನಾಡಿನ ಜನತೆ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆಯಿಂದಾಗ ಅವರಿಗೆ ಗೌರವ ಬರುವ ಹಾಗೆ ನಡೆದುಕೊಳ್ಳಬೇಕು. ಇಂದು ಮಹನೀಯರ ಜಯಂತಿ ಕಾರ್ಯಕ್ರಮಗಳು ಜಾತಿ ಜನಾಂಗಕ್ಕೆ ಸೀಮಿತವಾಗದೆ ಸಮುಧಾಯ ಪಾಲ್ಗೊಳ್ಳುವಂತೆ ಮಾಡಬೇಕಾದ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಕನ್ನಡ ರಾಜ್ಯೋತ್ಸವ ಹಾಗೂ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮಗಳಿಗೆ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡಿದರು.

ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಎರಡು ಕಾರ್ಯಕ್ರಮಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೆ ಭಾಗವಹಿಸುವುದು ವಾಡಿಗೆ ಆದರೆ ಇಂದಿನ ಸಭೆಗೆ ಬಹುತೇಕ ಅಧಿಕಾರಿಗಳು ಗೈರಾಗಿದ್ದು, ತಮ್ಮ ಕೆಳ ಹಂತದ ಅಧಿಕಾರಿಗಳನ್ನು ನಿಯೋಜಿಸಿ ಕೇಂದ್ರ ಕಛೇರಿಯಲ್ಲಿ ಕೆಲಸದ ನಿಮಿತ್ತ ತೆರಳಿದ್ದಾರೆ ಎಂದು ಸಬೂಬು ಹೇಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಮುಂದೆ ನಡೆಯುವ ಕಾರ್ಯಕ್ರಮಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಹಿಡಿದು ಡಿ.ಗ್ರೂಪ್ ನೌಕರರ ವರೆಗೆ ಭಾಗವಹಿಸದೆ ಅಸಡ್ಡೆ ತೋರಿದರೆ ಮಾನ್ಯ ಮುಖ್ಯ ಮಂತ್ರಿಗಳು, ಸಚಿವರುಗಳು, ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಗಳ ಹಂತಕ್ಕೆ ಲಿಖಿತ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ತಹಶೀಲ್ದಾರ್ ಲೆಪ್ಟಿನಂಟ್ ಕರ್ನಲ್ ಡಾ.ಎಸ್.ಯು.ಅಶೋಕ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ, ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಕೆ.ಪುರುಷೋತ್ತಮ್, ಪುರಸಭೆ ಸದಸ್ಯ ಕೆ.ಆರ್.ರವೀಂದ್ರಬಾಬು, ತಾ.ಪಂ.ಇಓ ಕೆ.ಸುಷ್ಮ, ಪೊಲೀಸ್ ಇನ್ಸ್ಪೆಕ್ಟರ್ ಸುಮಾರಾಣಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಪಿ.ಪೂರ್ಣಚಂದ್ರತೇಜಶ್ವಿ, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಹೊನ್ನೇನಹಳ್ಳಿ ಸೋಮಶೇಖರ್, ಆಟೋ ಮಾಲೀಕರ ಸಂಘದ ಅಧ್ಯಕ್ಷ ವಾಸು, ಕೃಷ್ಣರಾಜಪೇಟೆ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಸ್.ಚಂದ್ರು, ಮಾತೃಭೂಮಿ ಅನಾಥಾಶ್ರಮದ ಮುಖ್ಯಸ್ಥ ಜೈಹಿಂದ್ ನಾಗಣ್ಣ, ಪಶು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ.ದೇವರಾಜು, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಜ್ಞಾನೇಶ್, ಗ್ರಾಮ ಲೆಕ್ಕಾಧಿಕಾರಿ ಜಗದೀಶ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ಅಮೃತ್ರಾಜ್ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಭಾಗವಹಿಸಿದ್ದರು.
– ಶ್ರೀನಿವಾಸ್ ಆರ್.

[…] ಇದನ್ನು ಓದಿ : ಕೆ.ಆರ್.ಪೇಟೆ- ಕನ್ನಡ ರಾಜ್ಯೋತ್ಸವ ಹಾಗೂ ದಾ… […]