ಕೆ.ಆರ್.ಪೇಟೆ : ತಾಲೂಕಿನ ಪಿ.ಎಲ್.ಡಿ ಬ್ಯಾಂಕ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಾಜಾನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ಮೋಹನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಡೆಯಿತು. ರಾಜಾನಾಯ್ಕ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬ್ಯಾಂಕಿನ ಕಾರ್ಯದರ್ಶಿ ಆನಂದ ಘೋಷಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ರಾಜಾನಾಯ್ಕ,ನನ್ನ ಮೇಲೆ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ನಿರ್ದೇಶಕ ಮಿತ್ರರಿಗೆ, ಸದಸ್ಯರಿಗೆ ನಾನು ಆಭಾರಿ. ಸಂಘದ ಶ್ರೇಯೋಭಿವೃದ್ಧಿಗೆ, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ, ರೈತರ ಹಾಗೂ ಸದಸ್ಯರ ಹಿತರಕ್ಷಣೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಹಿಂದಿನ ಅಧ್ಯಕ್ಷರುಗಳ ಅವಧಿಯಲ್ಲಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದೆ. ಅವರ ಉತ್ತಮ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ.ರೈತರಿಗೆ ಸಕಾಲಕ್ಕೆ ಸಾಲ-ಸೌಲಭ್ಯ ಒದಗಿಸುವುದು, ವಸೂಲಾತಿಗೆ ಒತ್ತು ನೀಡುವುದು, ಬ್ಯಾಂಕಿನಲ್ಲಿ ಪಾರದರ್ಶಕ ಆಡಳಿತ ತರುವುದು ನನ್ನ ಮೊದಲ ಆದ್ಯತೆ. ಕೇಂದ್ರ-ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಿ ಸಂಘವನ್ನು ಲಾಭದಾಯಕವಾಗಿ ನಡೆಸುತ್ತೇನೆ” ಎಂದು ಭರವಸೆ ನೀಡಿದರು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮುಖಂಡ ಕಾರಿಗನಹಳ್ಳಿ ಕುಮಾರ್ ಮಾತನಾಡಿ, ರಾಜಾನಾಯ್ಕ ಅವರು ಕ್ರಿಯಾಶೀಳ ಆಡಳಿತಗಾರ ರೈತಪರ ಹಾಗೂ ಬ್ಯಾಂಕಿನ ಶ್ರೇಯೋಭಿವೃದ್ಧಿಗೆ ಕಾಳಜಿ ಇರುವ ವ್ಯಕ್ತಿ ಇವರ ನೇತೃತ್ವದಲ್ಲಿ ಪಿ.ಎಲ್.ಡಿ ಬ್ಯಾಂಕ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಗುಣ ಅವರಲ್ಲಿದೆ. ಎಲ್ಲರೂ ಪಕ್ಷಭೇದ ಮರೆತು ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜಾನಾಯ್ಕ ಅವರನ್ನು ಬ್ಯಾಂಕಿನ ನಿರ್ದೇಶಕರು ಹಾಗೂ ಮುಖಂಡರು ಹಾರ ಹಾಕಿ, ಸಿಹಿ ವಿತರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ರಮೇಶ್ (ಸಿಮೆಂಟ್ ಮಂಜು)ನಿಕಟಪೂರ್ವ ಅಧ್ಯಕ್ಷ ಮೋಹನ್,ನಿರ್ದೇಶಕರಾದ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ, ರಮೇಶ್, ಅಣ್ಣೇಚಾಕನಹಳ್ಳಿ ನಾಗರಾಜೇಗೌಡ, ಮಾಳಗೂರು ಜಗದೀಶ್, ಬನ್ನೇನಹಳ್ಳಿ ಧನಂಜಯ್, ಲಕ್ಷ್ಮೀಪುರ ಚಂದ್ರೇಗೌಡ, ಬಂಡಿಹೊಳೆ ನಾಗೇಶ್, ಮಂಜುಳಾ ಕೃಷ್ಣೇಗೌಡ, ಕವಿತಾ ಚಂದ್ರೇಗೌಡ, ಮುಖಂಡರಾದ ಹೊನ್ನೇನಹಳ್ಳಿ ಕೃಷ್ಣೇಗೌಡ, ಅಕ್ಕಿಹೆಬ್ಬಾಳು ಮಹೇಶ್ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
