ಕೆ.ಆರ್.ಪೇಟೆ: ತಾಲೂಕಿನ ಕಿಕ್ಕೇರಿ ಹೋಬಳಿಯ ಚಿಕ್ಕತಾರಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ರಾಮಕೃಷ್ಣೇಗೌಡ(70) ರವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳ್ಳೂರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ 9.30ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೇ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಟ್ಟತಾಯಮ್ಮ(ರುಕ್ಮಿಣಿಯಮ್ಮ), ಇಬ್ಬರು ಪುತ್ರರು , ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಜ.13ರಂದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಚಿಕ್ಕತಾರಹಳ್ಳಿ ನಢಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ಶಾಸಕ ಹೆಚ್.ಟಿ ಮಂಜು, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಸೇರಿದಂತೆ ವಿವಿಧ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಆರ್.
