ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರವಿರಾಮೇಗೌಡ ಹಾಗೂ ಉಪಾಧ್ಯಕ್ಷರಾಗಿ ಶೀಲಾಬಾಬು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ರವಿರಾಮೇಗೌಡ ನನ್ನ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ್ ರಾಮೇಗೌಡ,ಟ್ರಾಕ್ಟರ್ ರಂಗೇಗೌಡ,ಮಳ್ಳೇಗೌಡರ ನಾಗೇಗೌಡ,ಮಾರ್ಗದರ್ಶನ ಮೇರೆಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆಗೆ ಸಹಕಾರ ನೀಡಿದ್ದಾರೆ ಅದಕ್ಕೆ ಋಣಿಯಾಗಿ ಪ್ರಾಮಾಣಿಕವಾಗಿ ಸಂಘದ ಅಭಿವೃದ್ಧಿಗೆ ಶ್ರಮವಹಿಸುತ್ತನೇ.ರೈತರ ಅನುಕೂಲವಾಗುವಂತೆ ತುರ್ತು ಹಾಲಿನ ಬಿಲ್ ಪಾವತಿ, ಪಾರದರ್ಶಕ ಆಡಳಿತ ನನ್ನ ಆದ್ಯತೆಯಾಗಿದೆ.ಎಲ್ಲರ ಸಹಕಾರದಿಂದ ಬೂಕನಕೆರೆ ಡೈರಿಯನ್ನು ಜಿಲ್ಲೆಯಲ್ಲೇ ಮಾದರಿ ಸಂಘವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನ ಅಭಿನಂದಿಸಿ ಮಾತನಾಡಿದ ತಾ.ಪಂ.ಮಾಜಿ ಅಧ್ಯಕ್ಷರಾದ ಜವರಾಯಿಗೌಡ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಮಸ್ಥರು ಪಕ್ಷಾತೀತವಾಗಿ ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡಿದ್ದಾರೆ. ಅದರಂತೆ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳಲಾಯಿತು .ನೂತನ ಆಡಳಿತ ಮಂಡಳಿಯವರು ಸಂಘದ ಮತ್ತು ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತುಕೊಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ,ಎಲ್ಲಾ ಸದಸ್ಯರಿಗೆ ಯಶಸ್ವಿನಿ ಯೋಜನೆಯನ್ನು ಮಾಡಿಸಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಅರಿವು ಮೂಡಿಸಿಬೇಕು ಪ್ರತಿ ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು
ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು,ಗ್ರಾಮದ ಹಾಲು ಉತ್ಪಾದಕರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ್ ರಾಮೇಗೌಡ,ಟ್ರಾಕ್ಟರ್ ರಂಗೇಗೌಡ,ಮಳ್ಳೇಗೌಡರ ನಾಗೇಗೌಡ,ಡೈರಿ ನಿರ್ದೇಶಕರಾದ ಮಂಜು, ರಾಮಕೃಷ್ಣ, ಗೀತಾ,ಯೋಗನರಸಿಂಹ,ಗೀತಾ, ವಿಶಾಲಾಕ್ಷಮ್ಮ,ಯೋಗ,ದಿನೇಶ್, ಮಂಜುಳಾ, ಸುಮಿತ್ರಾ, ಕೆಡಿಪಿ ಸದಸ್ಯ ಮಲ್ಲಿಕಾರ್ಜುನ, ಡೈರಿ ಕಾರ್ಯದರ್ಶಿ ಅವಿನಾಶ್,ಮುಖಂಡ ಸಿದ್ದಿಕ್,ಸೋಮಶೇಖರ್, ರಂಗನಾಥ,ಸಂಜು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
