ಕೆ.ಆರ್.ಪೇಟೆ : ವಿದ್ಯಾರ್ಥಿಗಳಿಗೆ ಸೃಜನಶೀಲತೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ಅವರಲ್ಲಿನ ಪ್ರತಿಭೆ ಹೊರತರಲು ಶಾಲಾ ವಾರ್ಷಿಕೋತ್ಸವ ಸಹಕಾರಿಯಾಗಿವೆ ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.ಹಾಗಾಗಿ ಸರ್ಕಾರಿ ಶಾಲೆಗಳನ್ನು ಬಲಪಡಿಸಿ ದಾಖಲಾತಿ ಹೆಚ್ಚಳ ಮಾಡಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಸರ್ಕಾರಿ ಶಾಲೆಗಳ ಸಾಮರ್ಥ್ಯವನ್ನು ಜನರಿಗೆ ತಿಳಿಸಿಕೊಡುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲಬೇಕು ಎಂದ ಅವರು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ಎಲ್ಲ ಬಗೆಯ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸುತ್ತಿದೆ.
ಅಲ್ಲದೇ ವರ್ಷವಿಡೀ ವ್ಯಾಸಂಗಕ್ಕೆ ಪೂರಕವಾಗಿ ಹಲವು ಪ್ರೋತ್ಸಾಹಕಾರಿ ಯೋಜನೆಗಳ ಮೂಲಕ ಮಕ್ಕಳಿಗೆ ಬಗೆ ಬಗೆಯ ಪರಿಕರ ಮತ್ತು ಸೌಲತ್ತು ನೀಡಲಾಗುತ್ತಿದೆ. ಖಾಸಗಿ ಶಾಲೆಗಿಂತ ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಕಲಿಕೆ ಹೆಚ್ಚಳವಾಗಿದೆ.ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಕೊಡಿಸುವ ಬಗ್ಗೆ ತೀವ್ರ ಗಮನ ಹರಿಸಬೇಕಾಗಿದೆ ಎಂದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಆನಂದ್ ಮಕ್ಕಳನ್ನು ಓದಿಸುವ ವಿಚಾರದಲ್ಲಿ ಶಿಕ್ಷಕರಷ್ಟೆ ಪೋಷಕರದ್ದು ಕೂಡ ದೊಡ್ಡ ಜವಾಬ್ದಾರಿಯಿದೆ. ಮಕ್ಕಳ ಓದಿನ ಬಗ್ಗೆ ಪೋಷಕರು ಸರಿಯಾಗಿ ಗಮನಿಸಬೇಕು.ಬದ್ಧತೆ,ಶಿಸ್ತು, ಧೈರ್ಯ ಈ ಎರಡು ಗುಣಗಳನ್ನು ಮಕ್ಕಳಿಗೆ ಧಾರೆಯೆರಯಬೇಕು. ಯಾವ ಕಾರಣಕ್ಕೂ ಮಕ್ಕಳು ಓದುವಾಗ ಟಿವಿ ಹಾಕಬೇಡಿ. ನಿಶ್ಯಬ್ದ ಪರಿಸರ ಇರಲಿ. ಮಕ್ಕಳ ಮುಂದೆ ಜಗಳ ಆಡಬೇಡಿ.ಇದು ಮಕ್ಕಳ ಮನಸ್ಸಿನ ಮೇಲೆ ಪ್ರತಿ ಪ್ರಭಾವ ಬೀರುತ್ತದೆ ಎಂದು ಎಚ್ಚರಿಸಿದರು.
ಬಳಿಕ ಮಾತನಾಡಿದ ಕಸಾಪ ತಾಲ್ಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಶ್ವಿ ಶಾಲಾ ವಾರ್ಷಿಕೋತ್ಸವದ ಸಂದರ್ಭ ಗ್ರಾಮಸ್ಥರು ಮತ್ತು ಜನ ಪ್ರತಿನಿಧಿಗಳು ಒಂದೆಡೆ ಕುಳಿತು ಚರ್ಚಿಸುವ ಕಾರಣ ಶಾಲಾ ವಾರ್ಷಿಕೋತ್ಸವ ಶಾಲೆ ಅಭಿವೃದ್ಧಿಗೆ ಪೂರಕವಾಗುವ ಒಂದು ಅರ್ಥಪೂರ್ಣ ಕಾರ್ಯಕ್ರಮ ಎಂದು ತಿಳಿಸಿದರು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕಿರಣ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದರು. ಶಾಲಾ ಪುಟಾಣಿಗಳಿಂದ ನೃತ್ಯ ಸಿಂಚನ,ವಿದ್ಯಾರ್ಥಿಗಳಿಂದ ವೈವಿದ್ಯಮಯ ನೃತ್ಯ ವೈಭವ, ಶಾಲಾ ವಿದ್ಯಾರ್ಥಿಗಳಿಂದ ನವ್ಯ ಶೈಲಿಯ ನಾಟಕ ಕುಣಿ ಕುಣಿ ನವಿಲೆ ಪ್ರದರ್ಶನಗೊಂಡಿತು. ಜಾನಪದ ನೃತ್ಯಗಳನ್ನು ವಿದ್ಯಾರ್ಥಿಗಳು ಅದ್ಭುತವಾಗಿ ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರಗು ತುಂಬಿದರು.
ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಶ್ವಿ,ಎಸ್ಸಿ ಎಸ್ಟಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿಕ್ಷಕ ಯೋಗೇಶ್,ಶಿಕ್ಷಣ ಸಂಯೋಜಕ ಸುರೇಶ, ಸಂಪನ್ಮೂಲ ವ್ಯಕ್ತಿ ಯೋಗೇಶ್,ಶಾಲೆ ಮುಖ್ಯ ಎಸ್.ಟಿ ರಾಮು, ಎಸ್ ಟಿ ಎಂ ಸಿ ಅಧ್ಯಕ್ಷ ಕಿರಣ್,ಡಾ ಧನಲಕ್ಷ್ಮೀ,ಶಿಕ್ಷಕರಾದ ಗುಡುಗನಹಳ್ಳಿ ಮಂಜುನಾಥ್, ಗೋಪಾಲಕೃಷ್ಣ, ಮಹೇಶ್,ಹೇಮಲತಾ, ವೀರಪ್ಪ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಗ್ರಾಮದ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
