ಕೆ.ಆರ್.ಪೇಟೆ : ತಾಲ್ಲೂಕಿನ ಹೊಯ್ಸಳರ ನೆಲೆಬೀಡು ಹೊಸಹೊಳಲು ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ತೆಪ್ಪೋತ್ಸವ ಹಿನ್ನೆಲೆ ಹೊಸಹೊಳಲು ಚಿಕ್ಕಕೆರೆಯಲ್ಲಿ ವಿದ್ಯುತ್ ದೀಪದಿಂದ ಅಲಂಕೃತಗೊಂಡಿದ್ದ ತೆಪ್ಪದಲ್ಲಿ ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೆರವಣಿಗೆ ಮೂಲಕ ಸಂಭ್ರಮದಿಂದ ಗುರುವಾರ ರಾತ್ರಿ ತೆಪ್ಪೋತ್ಸವ ನಡೆಯಿತು.
ಈ ಸುಂದರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಬಂದ ಭಕ್ತಾದಿಗಳಿಗೆ ಶ್ರೀ ಸುರಕ್ಷಾ ಗ್ರೂಪ್ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಿದ್ದ ಅನ್ನ ಸಂತರ್ಪಣೆಯನ್ನು *ಸಮಾಜ ಸೇವಕ ಆರ್ಟಿಓ ಮಲ್ಲಿಕಾರ್ಜುನ್* ರವರು ಭಕ್ತರಿಗೆ ಅನ್ನ ಸಂತರ್ಪಣೆ ಬಡಿಸುವ ಮೂಲಕ ಚಾಲನೆ ನೀಡಿದರು.

ತೆಪ್ಪಗಳ ನಡುವೆ ಹಲಗೆಯಿಂದ ನಿರ್ಮಿಸಲಾದ ವೇದಿಕೆಯಲ್ಲಿ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಬಾಳೆ, ಕಬ್ಬು, ಮಾವಿನ ತಳಿರು ತೋರಣ ಹಾಗೂ ಹೂವಿನಿಂದ ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು.ಮಂಗಳವಾದ್ಯಗಳೊಂದಿಗೆ ತೆಪ್ಪವನ್ನು ಕೆರೆಯಲ್ಲಿ ನಾಲ್ಕೂ ದಿಕ್ಕುಗಳಲ್ಲಿ ಸಾಗಿಸಲಾಯಿತು.
ತೆಪ್ಪ ಮುಂದಕ್ಕೆ ಸಾಗುತ್ತಿದ್ದಂತೆ ಜನ ಕೈ ಮುಗಿದು ಭಕ್ತಿ ಸಮರ್ಪಿಸಿದರು.ಈ ವೇಳೆ ಮೃದುವಾದ ಧ್ವನಿಯಲ್ಲಿ ಮೊಳಗಿದ ‘ ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿಯ ಗೋವಿಂದಾ..ಗೋವಿಂದ…ಎಂಬ ನಾಮಸ್ಮರಣೆ ಮುಗಿಲು ಮುಟ್ಟಿದವು.ತೆಪ್ಪೋತ್ಸವಕ್ಕೆ ಆಗಮಿಸಿ ಶ್ರೀ ಲಕ್ಷ್ಮೀನಾರಾಯಣ (ನಂಬಿ ನಾರಾಯಣ )ಬಳಿ ಸಂಕಲ್ಪ ಮಾಡಿಕೊಂಡರೆ ಇಷ್ಟಾರ್ಥ ಸಿದ್ಧಿಸುತ್ತದೆಂಬ ಎನ್ನುವ ನಂಬಿಕೆ ಭಕ್ತರದ್ದು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಚಂದ್ರು,ರಘು,ನಂದಕುಮಾರ್,ಪುರಸಭಾ ಸದಸ್ಯ ಪ್ರವೀಣ್, ಮಂಜು, ರವಿಚಂದನ್, ಯಜಮಾನ ಚಿಕ್ಕೇಗೌಡ,ರಾಮು,ಶಿವರಾಮಣ್ಣ, ಸುರಕ್ಷಾ ಗ್ರೂಪ್ ನಂದಿ ಮೆಡಿಕಲ್ ಪುನೀತ್, ಕಾಂತರಾಜು, ಕಿರಣ್,ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ಗಂಜಿಗೆರೆ ಮಹೇಶ್, ಗ್ರಾಮದ ಯಜಮಾನರು, ಯುವಕರು, ಮಹಿಳೆಯರು ಸೇರದಂತೆ ಭಕ್ತ ಸಮೂಹ ಪಾಲ್ಗೊಂಡಿದ್ದು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ.
