ಕೆ.ಆರ್.ಪೇಟೆ,ಜ.06: ತಾಲ್ಲೂಕು ಅಹಿಂದ ವರ್ಗಗಳ ಒಕ್ಕೂಟ ಹಾಗೂ ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದರಾಮಯಯ್ಯ ಅವರು 7ವರ್ಷ 240ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ 7ವರ್ಷ 239ದಿನ ಆಡಳಿತ ನಡೆಸಿದ ಡಿ.ದೇವರಾಜ ಅರಸು ಅವರ ದಾಖಲೆಯನ್ನು ಹಿಂದಿಕ್ಕಿದ ಹಿನ್ನೆಲೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದರಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಣೆ ಮಾಡಿ ವಿಜಯೋತ್ಸವ ಆಚರಣೆ ಮಾಡಿದರು.
ವಿಜಯೋತ್ಸವ ನೇತೃತ್ವ ವಹಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು ಮಾತನಾಡಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ವರ್ಷಗಳ ಕಾಲ ದೀರ್ಘಾವದಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಕೀರ್ತಿಗೆ ಭಾಜನರಾಗಿದ್ದು ಇದು ನಾಡಿಗೆ ಹೆಮ್ಮೆ ತರುವ ವಿಚಾರವಾಗಿದೆ. ಇದು ಕರ್ನಾಟಕ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಹೆಮ್ಮೆ ತರುವ ವಿಚಾರವಾಗಿದೆ. ಹಾಗಾಗಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪಟ್ಟಣದ ಮುತ್ತುರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅರ್ಚನೆ, ಅಭಿಷೇಕ ಮಾಡಿಸಿ ಸಿದ್ದರಾಮಯ್ಯ ಅವರು ಇನ್ನೂ ಹೆಚ್ಚು ದಿನಗಳ ಕಾಲ ರಾಜ್ಯದ ಅಧಿಕಾರ ನಡೆಸಲು ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ವಿಜಯೋತ್ಸವದಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಪುರಸಭಾ ಸದಸ್ಯ ಕೆ.ಆರ್.ರವೀಂದ್ರಬಾಬು, ಡಿ.ಪ್ರೇಮಕುಮಾರ್, ಕೆ.ಕೆ.ರಮೇಶ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಪುರುಷೋತ್ತಮ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಎನ್.ದಿವಾಕರ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ಯಾಮಣ್ಣ, ಸಣ್ಣನಿಂಗೇಗೌಡ, ಎಲ್.ಪಿ.ನಂಜಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲೋಲಾಕ್ಷಿಜಗದೀಶ್, ಮೀನಾಕ್ಷಿರಮೇಶ್, ವಿನೂತ ಸುರೇಶ್, ಗ್ಯಾರಂಟಿ ಸಮಿತಿ ಸದಸ್ಯರಾದ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಶಿವಮ್ಮ, ಮುಖಂಡರಾದ ರಾಯಪ್ಪ, ಸಾಸಲು ಈರಪ್ಪ, ಜವರಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.

[…] […]