ಕೆ.ಆರ್.ಪೇಟೆ: ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರ ಹೆಸರಿನಲ್ಲಿ ಅವರ ಅಪ್ಪಟ್ಟ ಅಭಿಮಾನಿ ದೊಡ್ಡಹಾರನಹಳ್ಳಿ ಮಲ್ಲೇಶ್ ವೈಯಕ್ತಿಕವಾಗಿ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಸರ್ಕಾರಿ ಪ್ರೌಢ ಶಾಲಾ 130.ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಸೇರಿದಂತೆ ಲೇಖನ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ನನ್ನ ಅಭಿಮಾನಿ ದೊಡ್ಡಹಾರನಹಳ್ಳಿ ಮಲ್ಲೇಶ್ ರವರ ಚಿಂತನೆಗೆ ನಿಜಕ್ಕೂ ಸಂತಸ ತಂದಿದೆ.ಸರ್ಕಾರ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಗೆ ಸರಿಸಮಾನವಾಗಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಗತ್ಯವಾದ ಸವಲತ್ತುಗಳನ್ನು ಕಲ್ಪಿಸುತ್ತ. ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದರ ಮೂಲಕ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ದೊರಕುವಂತೆ ಮಾಡುತ್ತಿದೆ .ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಠ್ಯಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯಕ್ಕೆ ಸಹಕಾರಯಾಗಿದ್ದು ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಪ್ರಗತಿಗೆ ಶ್ರಮ ವಹಿಸಬೇಕು, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸರ್ಕಾರ ನೀಡುವ ಸವಲತ್ತುಗಳೊಂದಿಗೆ ಸಂಘ ಸಂಸ್ಥೆಗಳು, ದಾನಿಗಳು, ಹಳೇ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಿಗೆ ಬೇಟಿ ನೀಡಿ ಪ್ರೋತ್ಸಾಹ ನೀಡಬೇಕು, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ತಡೆಯಲು ಸರ್ಕಾರದ ಯೋಜನೆಗಳಿಗೆ ನಾವುಗಳು ಕೂಡ ಕೈಜೋಡಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.

ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ದಯಾವತಿ ರಾಣ್ಯ, ಸರ್ಕಾರಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಸದಾ ಚಿಂತಿಸುವ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ ಹೆಸರಿನಲ್ಲೇ, ಅವರ ಅಭಿಮಾನಿ ದೊಡ್ಡಹಾರನಳ್ಳಿ ಮಲ್ಲೇಶ್ ನಮ್ಮ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್,ಲೇಖನ ಸಾಮಗ್ರಿಗಳೂ ನೀಡುತ್ತಿರುವುದು ಶ್ಲಾಘನೀಯ ಎಂದರು.
ಬಳಿಕ ಮಾತನಾಡಿದ ದೊಡ್ಡ ಹಾರನಹಳ್ಳಿ ಮಲ್ಲೇಶ್ ನಮ್ಮ ನೆಚ್ಚಿನ ನಾಯಕರಾದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಸದಾ ಸದೃಢ ಸಮಾಜಕ್ಕಾಗಿ ಚಿಂತಿಸುತ್ತಿರುವ ಅಪರೂಪದ ವ್ಯಕ್ತಿಯ ಚಿಂತನೆಯ ನನಗೆ ಸ್ಪೂರ್ತಿಯಾಗಿದೆ ಆ ನಿಟ್ಟಿನಲ್ಲಿ ಅವರ ಹೆಸರಿನಲ್ಲೇ ನನ್ನ ವೈಯಕ್ತಿಕವಾಗಿ ಶಾಲಾ ಮಕ್ಕಳಿಗೆ ಕೈಲಾದ ಸೇವೆ ಸಲ್ಲಿಸುತ್ತಿದ್ದರು ಈ ಸೇವೆಗೆ ಶಕ್ತಿ ನಮ್ಮ ನಾಯಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ್ ವಹಿಸಿದರು. ಪರಿಕರಗಳನ್ನು ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ್,ವೆಸ್ಟ್ಇಂಡೀಸ್ ದೇಶದ ಕಾಲೇಜಿನ ಗಣಿತ ಉಪನ್ಯಾಸಕ ಸಂತೆಬಾಚಹಳ್ಳಿ ಪ್ರಭುಗೌಡ,ಗ್ರಾ.ಪಂ ಸದಸ್ಯ ಹುಬ್ಬನಹಳ್ಳಿ ಕುಮಾರ್, ಗೆಳೆಯರ ಬಳಗದ ಅಧ್ಯಕ್ಷ ಗೌಡ ಜಯಕುಮಾರ್,ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲೋಕನಹಳ್ಳಿ ಪುನೀತ್,ದಿನೇಶ್, ಸೋಮಶೇಖರ್ , ರವಿ, ಸತೀಶ್,ಲಕ್ಕೆಗೌಡ,ಶಾಲಾ ಶಿಕ್ಷಕ ವೆಂಕಟೇಶ್, ಶಾಲಾ ಮಕ್ಕಳು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
