ಕೆ.ಆರ್.ಪೇಟೆ.: ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿ ಹಾಗೂ ಮೂಲತಃ ನಾಗಮಂಗಲ ತಾಲ್ಲೂಕಿನ ಮೈಲಾರಪಟ್ಟಣ ಗ್ರಾಮದವರಾದ ಲೋಕೇಶ್ (44) ಅವರು ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಅಮೃತಸರದಲ್ಲಿ ಕರ್ತವ್ಯನಿರತರಾಗಿದ್ದಾಗ ಶನಿವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಮೃತಸರದ ಸೇನಾ ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರುಗೆ ತರಲಾಗುತ್ತಿದೆ. ಬಳಿಕ ಸೇನಾ ವಾಹನದ ಮೂಲಕ ಹುಟ್ಡೂರು ಮೈಲಾರಪಟ್ಟಣಕ್ಕೆ ಸಾಗಿಸಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮಂಡ್ಯ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕ ಹೆಚ್.ಟಿ. ಮಂಜು, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಮಾಜಿ ಶಾಸಕರು ಕೆ. ಸುರೇಶ್ ಗೌಡ, ಎಲ್.ಆರ್. ಶಿವರಾಮೇಗೌಡ, ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, ಜಿಲ್ಲಾಧಿಕಾರಿ ಡಾ. ಕುಮಾರ್, ನಾಗಮಂಗಲ ತಹಸೀಲ್ದಾರ್ ಆದರ್ಶ, ಕೆ.ಆರ್.ಪೇಟೆ ತಹಸೀಲ್ದಾರ್, ಲೆಫ್ಟಿನೆಂಟ್ ಕರ್ನಲ್ ಡಾ. ಎಸ್.ಯು. ಅಶೋಕ್, ಆರ್.ಟಿ.ಓ. ಮಲ್ಲಿಕಾರ್ಜುನ್, ವಿಜಯ್ ರಾಮೇಗೌಡ, ಡಾಲುರವಿ (ಮನ್ಮುಲ್ ನಿರ್ದೇಶಕ), ಎಂ.ಬಿ. ಹರೀಶ್,ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಮಗದ ರಾಜ್ಯಾಧ್ಯಕ್ಷ ಕೆ.ಆರ್.ಪೇಟೆ ಬಿ.ನಾಗೇಂದ್ರಕುಮಾರ್, ಲಕ್ಷ್ಮೀನಾರಾಯಣ್, ನೆಲ್ಲಿಗೆರೆ ಬಾಲು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಚಿನ್ ಚೆಲುವರಾಯಸ್ವಾಮಿ, ಪುರಸಭಾ ಅಧ್ಯಕ್ಷೆ ಪಂಕಜಾ ಪ್ರಕಾಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಎನ್. ಪ್ರವೀಣ್, ಪುರಸಭಾ ಸದಸ್ಯ ಹೆಚ್.ಆರ್. ಲೋಕೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಆರ್.
