ಕೆ.ಆರ್.ಪೇಟೆ: ಸಮಾಜ ಸೇವಕ ಅವರ ಹುಟ್ಟುಹಬ್ಬದ ಅಂಗವಾಗಿ ಮೇ 20ರಂದು ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ರಾಜ್ಯ ಮಟ್ಟದ ರಂಗಕುಣಿತ ಸ್ಪರ್ಧೆ, ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಹಾಸ್ಯ ಕಾರ್ಯಕ್ರಮ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಟ್ರಸ್ಟ್ ಕಚೇರಿಯಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಮೈಸೂರಿನ ಅನಘ ಆಸ್ಪತ್ರೆಯ ತಜ್ಞ ವೈದ್ಯ , ಕಳೆದ ಹಲವು ವರ್ಷಗಳಿಂದ ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಆದರ್ಶಗಳನ್ನು ಮುಂದುವರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಉಚಿತ ಆರೋಗ್ಯ ಶಿಬಿರದಲ್ಲಿ ರಾಜ್ಯದ ವಿವಿಧ ಸೂಪರ್ ಸ್ಪೆಷಾಲಿಟಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳ 120ಕ್ಕೂ ಹೆಚ್ಚು ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಹೃದಯ, ನರರೋಗ, ಮೂತ್ರಪಿಂಡ, ಮಧುಮೇಹ, ಕ್ಯಾನ್ಸರ್, ಕೀಲು-ಮೂಳೆ, ಕಿವಿ-ಮೂಗು-ಗಂಟಲು, ಮಕ್ಕಳ ಹಾಗೂ ಮಹಿಳಾ ಆರೋಗ್ಯ ಸೇರಿದಂತೆ ಹಲವು ವಿಭಾಗಗಳ ತಪಾಸಣೆ ನಡೆಯಲಿದೆ. ಸುಮಾರು 10 ಸಾವಿರ ಮಂದಿಗೆ ಆರೋಗ್ಯ ತಪಾಸಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ₹5 ಸಾವಿರದವರೆಗಿನ ಪರೀಕ್ಷೆಗಳನ್ನು ಸ್ಥಳದಲ್ಲಿಯೇ ಉಚಿತವಾಗಿ ನಡೆಸಲಾಗುವುದು ಎಂದು ಹೇಳಿದರು.
ಮೇ 16 ಅರ್ಜಿ ಸಲ್ಲಿಕೆಗೆ ಕೊನೆ ದಿನ
2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸಿಬಿಎಸ್ಸಿ/ಐಸಿಎಸ್ಇ ಪಠ್ಯಕ್ರಮದಲ್ಲಿ ಶೇಕಡಾ 85ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ದೃಢೀಕೃತ ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಭಾವಚಿತ್ರಗಳನ್ನು ಟ್ರಸ್ಟ್ ಕಚೇರಿಗೆ ಸಲ್ಲಿಸಬೇಕು. ಮೇ 16 ಸಂಜೆ 6 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಮಟ್ಟದ ರಂಗಕುಣಿತ ಉತ್ಸವ
ಮೇ 19ರಂದು ಸಂಜೆ 7 ಗಂಟೆಗೆ ಟ್ರಸ್ಟ್ ಕಚೇರಿ ಆವರಣದಲ್ಲಿ ರಾಜ್ಯ ಮಟ್ಟದ ರಂಗಕುಣಿತ ಉತ್ಸವ ಮತ್ತು ಸ್ಪರ್ಧೆ ನಡೆಯಲಿದೆ. ಭಾಗವಹಿಸುವ ಪ್ರತಿಯೊಂದು ತಂಡಕ್ಕೂ ₹5000 ಗೌರವಧನ ನೀಡಲಾಗುತ್ತಿದ್ದು, ಅತ್ಯುತ್ತಮ ಮೂರು ತಂಡಗಳಿಗೆ ವಿಶೇಷ ಬಹುಮಾನ ಘೋಷಿಸಲಾಗಿದೆ.
ಕಾರ್ಯಕ್ರಮದಲ್ಲಿ ತಂಡದಿಂದ ಹಾಸ್ಯ ಕಾರ್ಯಕ್ರಮ, ಬಿಗ್ಬಾಸ್ ಖ್ಯಾತಿಯ ಕಲಾವಿದರ ಭಾಗವಹಿಸುವಿಕೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಡಾ. ಜೆ.ಜೆ. ಆನಂದ್, ಡಾ. ನಿರೂಪ್ ರಾಜ್, ಮೌರ್ಯ ಆಸ್ಪತ್ರೆ ನಿರ್ದೇಶಕ ವೈ.ಕೆ. ಮಂಜುನಾಥ್, ಸಾಹಿತಿ ರಂಗಸ್ವಾಮಿ, ಕೆ.ಆರ್. ನೀಲಕಂಠ, ಟಿ.ವೈ. ಆನಂದ್, ಸುಜೇಂದ್ರ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ.
