ಕೆ.ಆರ್.ಪೇಟೆ,ಜ.23: ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಾಲ್ಲೂಕಿನ ಆರ್.ಡಿ.ಪಿ.ಆರ್ ನೌಕರರು ಭಾಗವಹಿಸಿ ಕೆ.ಆರ್.ಪೇಟೆ ತಾಲ್ಲೂಕಿಗೆ ಅತಿಹೆಚ್ಚು ಬಹುಮಾನಗಳನ್ನು ಪಡೆದ ಹಿನ್ನೆಲೆಯಲ್ಲಿ ತಾಲ್ಲೂಕು ಜಯ ಕರ್ನಾಟಕ ಸಂಘಟನೆ ಮಹಿಳಾ ಘಟಕ ಹಾಗೂ ಪಟ್ಟಣದ ಶ್ರೀ ಚಾಮುಂಡೇಶ್ವರಿ ರಸ್ತೆ ಬದಿಯ ವ್ಯಾಪಾರಿಗಳ ಸಂಘದ ವತಿಯಿಂದ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ ರವರಿಗೆ ಬಾಗಿನ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಮಾತನಾಡಿದ ಕೆ.ಸುಷ್ಮಾ ಅವರು ನಮ್ಮ ಆರ್.ಡಿ.ಪಿ.ಆರ್. ಇಲಾಖೆಯ ನೌಕರರು ಪರಿಶ್ರಮ ವಹಿಸಿ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಚ್ಚು ಬಹುಮಾನಗಳನ್ನು ಪಡೆದುಕೊಂಡಿರುವುದು ತಾಲ್ಲೂಕಿಗೆ ಹೆಮ್ಮೆ ತರುವ ವಿಚಾರವಾಗಿದೆ. ನಮ್ಮ ಪಂಚಾಯತ್ ರಾಜ್ ಇಲಾಖೆಯ ನೌಕರರು, ಪಿಡಿಓಗಳು, ಕಾರ್ಯದರ್ಶಿಗಳು ಇದೇ ರೀತಿ ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಸಾಧನೆ ಮಾಡಿದರೆ ಇದರಿಂದ ಇನ್ನೂ ಹೆಚ್ಚಿನ ಗೌರವ ಸಿಗುತ್ತದೆ ಎಂದು ಇಓ ಸುಷ್ಮಾ ಅವರು ಹೇಳಿದರು. ನಮ್ಮ ಇಲಾಖೆಯ ಸಾಧನೆಯನ್ನು ಗಮನಿಸಿ ಪಟ್ಟಣದ ವಿವಿಧ ಸಂಘಟನೆಗಳ ಮಹಿಳಾ ಪದಾಧಿಕಾರಿಗಳು ನನಗೆ ಭಾಗೀನ ಅರ್ಪಿಸಿ ಸನ್ಮಾನಿಸಿರುವುದು ನನಗೆ ತವರಿಗೆ ಸನ್ಮಾನ ಸಿಕ್ಕಂತಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಮಹಿಳಾ ಅಧ್ಯಕ್ಷೆ ಜಯಲಕ್ಷ್ಮಮ್ಮ , ರಾಜಮ್ಮ, ಗೌರಮ್ಮ. ಶ್ರೀ ಚಾಮುಂಡೇಶ್ವರಿ ರಸ್ತೆ ಬದಿಯ ವ್ಯಾಪಾರಿಗಳು ಸಂಘದ ಮಹಿಳಾ ಅಧ್ಯಕ್ಷೆ ರತ್ನಮ್ಮ ಪ್ರಧಾನ ಕಾರ್ಯದರ್ಶಿ ದ್ರಾಕ್ಷಾಯಿಣಿ. ಪದಾಧಿಕಾರಿಗಳಾದ ಅನು, ಮಂಜುಳಾಕೆಂಪರಾಜು, ಪುಟ್ಟಮ್ಮ, ಚೈತ್ರ, ಗೌರಿ, ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
