ಕೆ.ಆರ್.ಪೇಟೆ,ಫೆ.20: ತಾಲ್ಲೂಕಿನ ಬೂಕನಕೆರೆ ಹೋಬಳಿಯ ರಂಗನಾಥಪುರ ಗ್ರಾಮದ ಹಿರಿಯ ಜೆಡಿಎಸ್ ಪಕ್ಷದ ಮುಖಂಡರು ಟಿಎಪಿಸಿಎಂಎಸ್ ಸಂಸ್ಥೆಯ ಹ್ಯಾಟ್ರಿಕ್ ನಿರ್ದೇಶಕರಾದ ರಂಗನಾಥಪುರ ನಾಗರಾಜು(70) ಅವರು ಶುಕ್ರವಾರ ಸಂಜೆ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆಯು ಫೆ.21ರ ಶನಿವಾರ ಬೆಳಿಗ್ಗೆ 11ಗಂಟೆಗೆ ಮೃತರ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ ಜಯಮ್ಮ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಮೃತರ ನಿಧನಕ್ಕೆ ಶಾಸಕ ಹೆಚ್.ಟಿ.ಮಂಜು, ಟಿಎಪಿಸಿಎಂಎಸ್ ಕಾರ್ಯದರ್ಶಿ ಬೋರೇಗೌಡ, ಬಲದೇವ್, ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಸಮಾಜ ಸೇವಕರಾದ ಆರ್.ಟಿ.ಓ.ಮಲ್ಲಿಕಾರ್ಜುನ್, ವಿಜಯ್ ರಾಮೇಗೌಡ, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಅಘಲಯ ಎ.ಎಸ್.ರಮೇಶ್, ಹಾಗೂ ಟಿಎಪಿಸಿಎಂಎಸ್ ಸಂಸ್ಥೆಯ ಎಲ್ಲಾ ನಿರ್ದೇಶಕರು ಸೇರಿದಂತೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಆರ್.
