ಕೆ.ಆರ್.ಪೇಟೆ: ತಾಲ್ಲೂಕಿನ ಹಿರಿಯ ಪತ್ರಕರ್ತರಾದ ಕೆ.ಆರ್.ನೀಲಕಂಠ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಕರ್ನಾಟಕ ಸರ್ಕಾರವು ಆಯ್ಕೆ ಮಾಡಿದೆ.
ನಾಡಿನ ವಿವಿಧ ಪತ್ರಿಕೆಗಳ ತಾಲ್ಲೂಕು ವರದಿಗಾರರಾಗಿ ಸೇವೆ ಸಲ್ಲಿರುವ ಕೆ.ಆರ್.ನೀಲಕಂಠ ಅವರು ಹೇಮಾವತಿ ಬಯಲು ಪತ್ರಿಕೆಯ ಸಂಪಾದಕರಾಗಿ ಪತ್ರಿಕೋದ್ಯಮದಕ್ಕೆ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ. ಈ ಸೇವೆಯನ್ನು ಗುರುತಿಸಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾಖಾನಂ ಮತ್ತು ಕಾರ್ಯದರ್ಶಿ ಎಂ.ಸಹನಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಪತ್ರಿಕೋದ್ಯಮದ ಅತ್ಯುತ್ತಮ ಪ್ರಶಸ್ತಿಯಾಗಿರುವ ಕರ್ನಾಟಕ ಮಾಧ್ಯಮ ಅಕಾಡೆಮಿ ನೀಡುವ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ವರದಿಗಾರ ಕೆ.ಆರ್.ನೀಲಕಂಠ ಅವರನ್ನು ತಾಲ್ಲೂಕಿನ ವಿವಿಧ ಪತ್ರಕರ್ತರು ಅಭಿನಂದಿಸಿದ್ದಾರೆ.
ಚಿತ್ರಶೀರ್ಷಿಕೆ:09.ಕೆ.ಆರ್.ಪಿ-01: ಕೆ.ಆರ್.ಪೇಟೆ: ತಾಲ್ಲೂಕಿನ ಹಿರಿಯ ಪತ್ರಕರ್ತರಾದ ಕೆ.ಆರ್.ನೀಲಕಂಠ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಕರ್ನಾಟಕ ಸರ್ಕಾರವು ಆಯ್ಕೆ ಮಾಡಿದೆ.
ವರದಿ : ಶ್ರೀನಿವಾಸ್ ಆರ್
============================
