ಕೆ.ಆರ್.ಪೇಟೆ : ಹಬ್ಬಹರಿದಿನಗಳಿಗೆ ಭಾರತೀಯ ಪರಂಪರೆಯಲ್ಲಿ ವಿಶೇಷ ಸ್ಥಾನ ನೀಡಲಾಗಿದ್ದು, ಅವುಗಳ ಆಚರಣೆ ಗ್ರಾಮೀಣ ಜನರ ಒಗ್ಗಟ್ಟಿನ ಸಂಕೇತವಾಗಿದೆ. ಹೀಗಾಗಿ ಅವುಗಳ ಆಚರಣೆಯಲ್ಲಿ ಇಂದಿಗೂ ಸಡಗರ,ಉತ್ಸಾಹ ಉಳಿದಿದೆ ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಶೀಳನೆರೆ ಹೋಬಳಿಯ ಸಿಂದಘಟ್ಟ ಗ್ರಾಮದ ಶ್ರೀ ಲಕ್ಷ್ಮೀದೇವಿ ಅಮ್ಮನವರ ಕರಗ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಭಾಗವಹಿಸಿ ದೇವಿ ದರ್ಶನ ಪಡೆದು ಮಾತನಾಡಿದರು.ಪ್ರತಿಯೊಬ್ಬರೂ ಮಾನವ ಧರ್ಮದ ನೆಲೆಗಟ್ಟಿನ ಮೇಲೆ ಬದುಕು ಸಾಗಿಸುತ್ತಿದ್ದಾರೆ ವಿವಿಧ ಧರ್ಮಗಳು ನಾಡಿನಲ್ಲಿದ್ದರೂ ಕೊನೆಗೆ ಐಕ್ಯಸ್ಥಾನ ಮಾತ್ರ ಒಂದೇ ಆಗಿದೆ. ನೊಂದ ಜೀವಗಳನ್ನು ಹಸನು ಮಾಡುವ ಶಕ್ತಿಯುಳ್ಳ ನಮ್ಮ ಸಂಸ್ಕೃತಿ ಅರ್ಥೈಸಿಕೊಳ್ಳಲು ವಿದೇಶಿಗರು ಒಲವು ತೋರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.ಜತೆಗೆ ಧರ್ಮದ ಜಾಗೃತಿ,ಮೌಲ್ಯ ಉಳಿಸಿ ಬೆಳೆಸಿಕೊಂಡು, ಬದುಕಿಗೆ ಅರ್ಥ ತಂದುಕೊಡುವಲ್ಲಿ ಪ್ರತಿಯೊಬ್ಬರೂ ಗಮನ ಹರಿಸಬೇಕಿದೆ.ಆ ನಿಟ್ಟಿನಲ್ಲಿ ಸಿಂದಘಟ್ಟ ಗ್ರಾಮದಲ್ಲಿ ಹಬ್ಬಹರಿದಿನಗಳಿಗೆ ಭಾರತೀಯ ಪರಂಪರೆಯಲ್ಲಿ ವಿಶೇಷ ಸ್ಥಾನ ನೀಡುವಂತ ಅಪರೂಪದ ಶ್ರೀ ಲಕ್ಷ್ಮೀದೇವಿ ಕರಗ ಅದ್ದೂರಿಯಾಗಿ ನೆರವೇರಿದೆ ಎಂದರು.

ಇದೆ ಸಂದರ್ಭದಲ್ಲಿ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ರವರನ್ನ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಆನಂದ್,ರಾಜಣ್ಣ, ವೆಂಕಟೇಶ್, ಅರ್ಚಕ ದೇವರಾಜು ಪ್ರಕಾಶ್, ಕೆ.ಆರ್.ಪೇಟೆ ಲೋಕೇಶ್, ರವಿ,ಗಂಗಾಧರ್, ವೆಂಕಟೇಶ್, ಸತ್ಯಮೂರ್ತಿ, ಶ್ರವಣಬೆಳಗೊಳ,ಬಳ್ಳೆಕೆರೆ ದೇವಾಲಯದ ಭಕ್ತರು ಇದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ
