ಕೆ.ಆರ್.ಪೇಟೆ-ವಿಕೃತಿ ಮನಸ್ಸಿನ ಕಿಡಿಗೇಡಿಗಳ ವಿರುದ್ಧ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ

ಕೂಲಿ ಕಾರ್ಮಿಕರು ಹೂಳೆತ್ತುವ ಸಂದರ್ಭದಲ್ಲಿ ಮಹಿಳಾ ಕೂಲಿ ಕಾರ್ಮಿಕರಿಗೆ ತೊಂದರೆ ನೀಡಿ ಶೌಚಾಲಯಕ್ಕೆ ತೆರಳುವ ಸಂದರ್ಭದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ಚಿತ್ರೀಕರಣ ಮಾಡಿರುವ ವಿಕೃತಿ ಮನಸ್ಸಿನ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ಕೆಲಸ ಮಾಡುವ ಸ್ಥಳದಲ್ಲೇ ಕೂಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಆಕೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.