ಕೆ.ಆರ್.ಪೇಟೆ: ಶಕ್ತಿ ದೇವತೆಗಳ ಆರಾಧನೆ ಮಾಡಿ ಹೋಮ ಹವನಗಳನ್ನು ನಡೆಸಿ ಪೂಜಿಸುವುದು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆಯಲ್ಲದೆ, ನಮ್ಮ ಪೂರ್ವಿಕರಿಂದ ನಮಗೆ ಬಂದಿರುವ ಪೂಜಾ ವಿಧಾನಗಳಾಗಿವೆ ಎಂದು ಸಮಾಜಸೇವಕ ಮಲ್ಲಿಕಾರ್ಜುನ್ ಹೇಳಿದರು.
ಅವರು ಇಂದು ಕೃಷ್ಣರಾಜಪೇಟೆ ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ ಗಣಪತಿ ಹೋಮ ಹಾಗೂ ಶ್ರೀಲಕ್ಷ್ಮಿ ದೇವಿಯ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

ವಿಜಯದಶಮಿ ದಸರಾ ಸೇರಿದಂತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶಕ್ತಿ ದೇವತೆಗಳ ಆರಾಧನೆ ಮಾಡಿ ಹೋಮ ಹವನಗಳನ್ನು ನಡೆಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿ ದೈವದ ಮೊರೆ ಹೋಗುವುದು ನಮ್ಮ ಪೂಜಾ ಸಂಪ್ರದಾಯದ ಒಂದು ಭಾಗವಾಗಿದೆ. ಪೂಜೆಯ ನೆಪದಲ್ಲಿ ಎಲ್ಲರೂ ಒಂದಾಗಿ ಭಗವಂತನ ನಾಮ ಸ್ಮರಣೆಯನ್ನು ಮಾಡುವುದರಿಂದ ನಮ್ಮ ಮನಸ್ಸಿನಲ್ಲಿರುವ ದ್ವೇಷ ಅಸೂಯೆಗಳ ಭಾವನೆಗಳು ದೂರಾಗಿ ಪರಸ್ಪರ ಪ್ರೀತಿ ವಿಶ್ವಾಸವು ಹೆಚ್ಚಾಗಿ ಭಾಂಧವ್ಯಗಳು ವೃದ್ಧಿಯಾಗುತ್ತವೆ. ಆದ್ದರಿಂದ ನಾವು ವಿಶೇಷ ದಿನಗಳಲ್ಲಿ ಪೂಜೆ ಪುರಸ್ಕಾರ ನಡೆಸಿ ಹೋಮ ಹವನ ನಡೆಸಿ ಪ್ರಸಾದ ವಿತರಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ನಡೆಸುತ್ತಿದ್ದೇವೆ ಎಂದು ಮಲ್ಲಿಕಾರ್ಜುನ್ ಅಭಿಮಾನದಿಂದ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕ ಯೋಗೇಶ್, ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಎಸ್.ರಾಜೇಶ್, ನಿರ್ದೇಶಕರಾದ ಮೊಟ್ಟೆ ಮಂಜು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಬಳ್ಳೇಕೆರೆ ಮಂಜುನಾಥ್, ಕೆ.ಆರ್.ನೀಲಕಂಠ, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಪ್ರಗತಿಪರ ಕೃಷಿಕರಾದ ಕೆ.ಟಿ. ರಾಮೇಗೌಡ, ಶಿಕ್ಷಣ ಇಲಾಖೆ ನೌಕರರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸಿಂದಘಟ್ಟ ನಾಗೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಮಾಜಿ ಅಧ್ಯಕ್ಷ ಪದ್ಮೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ್ ಕುಮಾರ್, ಪುರಸಭೆ ಅಧ್ಯಕ್ಷೆ ಪಂಕಜಾ ಪ್ರಕಾಶ್,ತಾಲ್ಲೂಕು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಯೋಜನಾಧಿಕಾರಿ ತಿಲಕ್ ರಾಜ್ ಗ್ರಾ.ಪಂ.ಸದಸ್ಯ ಆರ್.ಶ್ರೀನಿವಾಸ್ ಸೇರಿದಂತೆ ಪ್ರಗತಿಬಂಧು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಹೋರಾಟಗಾರರು ಗಣಪತಿ ಹೋಮದ ವಿಶೇಷ ಪೂಜಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
–ಶ್ರೀನಿವಾಸ್ ಆರ್.

[…] ಕೆ.ಆರ್.ಪೇಟೆ: ಶಕ್ತಿ ದೇವತೆಗಳ ಆರಾಧನೆ ಮಾಡಿ… […]