ಕಾಶ್ಮೀರ ಪಾಕ್ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್
ಬೆಂಗಳೂರು: ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಭಾರತ-ಪಾಕ್ ಉದ್ವಿಗ್ನ ಸಂದರ್ಭದಲ್ಲಿ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್ನಿಂದ ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ.
ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕರ್ನಾಟಕ ಕಾಂಗ್ರೆಸ್
ಭಾರತ-ಪಾಕಿಸ್ತಾನ ಕದನದ ನಡುವೆ ಕರ್ನಾಟಕ ಕಾಂಗ್ರೆಸ್ ಮತ್ತೊಂದು ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಂಗ್ರೆಸ್ ಯಡವಟ್ಟು ಮಾಡಿಕೊಂಡಿದೆ. ಪಾಕಿಸ್ತಾನಕ್ಕೆ ಐಎಂಎಫ್ ಲೋನ್ ನೀಡಿದ್ದನ್ನ ಟೀಕಿಸಿ ಪೋಸ್ಟ್ ಹಾಕಲಾಗಿದೆ.
ಆದರೆ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಅಷ್ಟರಲ್ಲಿ ಕರ್ನಾಟಕ ಕಾಂಗ್ರೆಸ್ನ ಎಡವಟ್ಟು ಡಿಸಿಎಂ ಡಿಕೆ ಶಿವಕುಮಾರ್ಗೆ ತಿಳಿದಿದ್ದು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಎಐಸಿಸಿಗೂ ರಾಜ್ಯ ಕಾಂಗ್ರೆಸ್ ಎಡವಟ್ಟು ತಲುಪಿದೆ.
