ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂದು ಸರ್ಕಾರಿ ಘೋಷಣೆ ಮಾಡಿದೆ.
ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧೀನ ಕಾರ್ಯದರ್ಶಿ ನಡವಳಿಯ ಮೂಲಕ ಆಯುಕ್ತರು ದಿನಾಂಕ 07-11-2024 ರಂದು ಈ ನೀತಿಗೆ ಅನುಮೋದನೆ ನೀಡಲಿದ್ದಾರೆ. ಹೀಗಾಗಿ, ಹಿಂದಿನ ನೀತಿಗೆ ಸಂಬಂಧಿಸಿದ ಎಲ್ಲಾ ಸರ್ಕಾರದ ಆದೇಶಗಳು ಅನೂರ್ಜಿತವಾಗುತ್ತವೆ ಎಂದು ತಿಳಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯು ರಾಜ್ಯದ ಜಿಲ್ಲೆಗಳ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಮತ್ತು ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ತಾಣಗಳನ್ನು ಗುರುತಿಸಿ, ಪ್ರವಾಸಿಗರ ಸಂಖ್ಯೆಗಳ ಅಂಕಿ-ಸಂಖ್ಯೆಗಳೊಂದಿಗೆ ಛಾಯಾಚಿತ್ರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗಳಿಂದ ಮಾಹಿತಿ ಸಂಗ್ರಹಿಸಿದೆ.
ಸರಕಾರ ಈ 1,275 ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಮತ್ತು ತಾಂತ್ರಿಕ ಪರಿಶೀಲನೆ ನಡೆಸುವಂತೆ ಯೋಜನೆ ರೂಪಿಸಿದೆ. ಸ್ಥಳಗಳಲ್ಲಿ ಕಾಮಗಾರಿಗೆ ಅನುದಾನ ಮಂಜೂರು ಮತ್ತು ಟೆಂಡರ್ ಪ್ರಕ್ರಿಯೆಗಾಗಿ ಪ್ರಾಧಿಕಾರದ ಅನುಮೋದನೆ ಕಡ್ಡಾಯವಾಗಿ ಪಡೆಯಲಾಗುವುದು.

\\
