ಮಾ.16:ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ ಜಿಲ್ಲಾಧ್ಯಕ್ಷರು, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ವಿಶ್ವ ವೀರಶೈವ ಲಿಂಗಾಯಿತ ಮಹಾ ವೇದಿಕೆ ರಾಜ್ಯಾಧ್ಯಕ್ಷರು, ರಾಜ್ಯ ಪ್ರಶಸ್ತಿ ವಿಜೇತರು ಹಾಗೂ ಹಿರಿಯ ಪತ್ರಕರ್ತರಾದ ಶರಣ ಎಂ.ಎನ್. ಕುಮಾರಸ್ವಾಮಿ ಅವರ 67ನೇ ವರ್ಷದ ಜನ್ಮದಿನ ಪ್ರಯುಕ್ತ ವಿಶೇಷವಾಗಿ ಕಾವೇರಿ ನದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಶುಭಾಶಯಗಳನ್ನು ಸಲ್ಲಿಸಲಾಯಿತು.
ಜನ್ಮದಿನದ ಅಂಗವಾಗಿ ಕಾವೇರಿ ನದಿಯ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಸ್ವಚ್ಛತಾ ಕಾರ್ಯದಲ್ಲಿ ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ನದಿ ತೀರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಳಬೋಯಿ, ಖಜಾಂಚಿ ರಘು, ಸಂಘಟನಾ ಕಾರ್ಯದರ್ಶಿ ಪಿ.ಎನ್.ಟಿ. ಶಿವಪ್ಪ, ತಾಲ್ಲೂಕು ಅಧ್ಯಕ್ಷ ಸಿದ್ದರಾಜು, ಖಜಾಂಚಿ ಕೇಶವ, ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಕಾರ್ಯದರ್ಶಿ ರೇವಣ್ಣ, ಗೋವಿಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶರಣ ಎಂ.ಎನ್. ಕುಮಾರಸ್ವಾಮಿ ಅವರು ಹಲವು ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದು, ಅವರ ಜನ್ಮದಿನವನ್ನು ಪರಿಸರ ಸ್ನೇಹಿ ರೀತಿಯಲ್ಲಿ ಆಚರಿಸಿರುವುದು ವಿಶೇಷ ಗಮನ ಸೆಳೆಯಿತು.
