ತುಮಕೂರು, ಫೆ. 13: ಸರ್ಕಾರದ ಆದೇಶದಂತೆ ಪ್ರತಿ ತಿಂಗಳ ಮೊದಲನೇ ಶನಿವಾರ ಸರ್ಕಾರಿ ನೌಕರರು ಖಾದಿ ವಸ್ತ್ರ ಧರಿಸಬೇಕು ಎಂಬ ನಿರ್ಧಾರದ ಹಿನ್ನೆಲೆ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಖಾದಿ ಮಾರಾಟ ಮಳಿಗೆಯನ್ನು ಆರಂಭಿಸಲಾಗಿದೆ.
ಮಳಿಗೆಯನ್ನು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಉದ್ಘಾಟಿಸಿದರು. ಮೊದಲನೇ ದಿನವೇ ಹಲವು ಸರ್ಕಾರಿ ನೌಕರರು ಖಾದಿ ವಸ್ತ್ರಗಳ ಖರೀದಿಯಲ್ಲಿ ತೊಡಗಿದ್ದು ಗಮನಾರ್ಹವಾಗಿತ್ತು.
ಈ ಸಂದರ್ಭದಲ್ಲಿ ತುಮಕೂರು ಖಾದಿ ಗ್ರಾಮೋದ್ಯೋಗ ಸಂಘದ ಅಧ್ಯಕ್ಷ ಕೆ.ಎಸ್. ಪಂಡಿತ್, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ದೇವರಾಜು, ಎಸ್. ಶೆಟ್ಟಿಹಳ್ಳಿ ಗ್ರಾಮಲೆಕ್ಕಾಧಿಕಾರಿ ರವಿ, ಕಂದಾಯ ನಿರೀಕ್ಷಕ ಶಿವಾನಂದ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಖಾದಿ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಮಳಿಗೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
– ಕೆ.ಬಿ.ಚಂದ್ರಚೂಡ
