ಮೈಸೂರು : ಕಳೆದ ಎರಡು ದಿನಗಳ ಹಿಂದೆ ಮೈಸೂರಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಬಹುದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿದ್ದರು ಇದೀಗ ನೆನ್ನೆ ರಾತ್ರಿ ಕಮಿಷನರ್ ನೇತೃತ್ವದಲ್ಲಿ ನಗರದ ಹಲವೆಡೆ ದಾಳಿ ನಡೆಸಲಾಗಿದೆ. ಹೌದು ಮೈಸೂರು ನಗರದಲ್ಲಿ ಡ್ರೆಸ್ ತಯಾರಿಕಾ ಘಟಕ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು ಮೈಸೂರು ನಗರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಮೈಸೂರು ನಗರದಾದ್ಯಂತ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, ನಿನ್ನೆ ರಾತ್ರಿ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ರೇಡ್ ನಡೆಸಲಾಗಿದೆ. ಮೈಸೂರು ನಗರದ ಮಂಡಿ ಮೊಹಲ್ಲ, ಉದಯಗಿರಿ, ಎನ್ ಆರ್ ಮೊಹಲ್ಲಾ, ನಜರ್ ಬಾದ್, ಕೆ ಆರ್ ಮೊಹಲ್ಲಾ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಡಿಸಿಪಿಗಳು ಎಸಿಪಿಗಳು ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಗಾಂಜಾ ಡ್ರಗ್ಸ್ ಮಾರಾಟ ಮಾಡುವವರನ್ನು ಗಡಿ ಪಾಡುವ ಮಾಡುವುದಾಗಿ ಕಮಿಷನರ್ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಪತ್ತೆಯಾದ ಮಾದಕ ವಸ್ತುವಿನ ಮೌಲ್ಯ ₹390 ಕೋಟಿ ಆಗುತ್ತದೆ’ ಎಂಬ ಮುಂಬೈ ಪೊಲೀಸರ ಹೇಳಿಕೆಗೆ ಅವರು, ‘ಸ್ಥಳೀಯ ಪೊಲೀಸರು ಹಾಗೂ ಮಹಾರಾಷ್ಟ್ರ ಪೊಲೀಸರಿಂದ ಜಂಟಿಯಾಗಿ ಕಾರ್ಯಾಚರಣೆ ನಡೆದಿದೆ. ನಂತರ ಅವರು ಮಹಜರು ನಡೆಸಿ ತೆರಳಿದ್ದು, 14.8 ಕೆ.ಜಿ. ಪೌಡರ್ ದೊರೆತಿದೆ ಎಂದಿದ್ದಾರೆ. ಅವರ ಹೇಳಿಕೆ ಕುರಿತು ನಮಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದರು.
‘ಮಂಗಳವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ 584 ಗ್ರಾಂ. ಗಾಂಜಾ, 5 ಗ್ರಾಂ. ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. 10 ಮೆಡಿಕಲ್ ಸ್ಟೋರ್ಗಳಲ್ಲಿ ತಪಾಸಣೆ ನಡೆಸಿದೆ. ಜಯಲಕ್ಷ್ಮೀಪುರಂ ಹಾಗೂ ಪಡುವಾರಹಳ್ಳಿಯಲ್ಲಿ ಹುಡುಗರ ಐದು ಪಿ.ಜಿಗಳಲ್ಲಿ ತಪಾಸಣೆ ನಡೆಸಲಾಗಿದೆ. ಮಂಡಿ ಮೊಹಲ್ಲಾ, ಉದಯಗಿರಿ ಹಾಗೂ ಲಷ್ಕರ್ ಠಾಣೆಗಳ ವ್ಯಾಪ್ತಿಯಲ್ಲಿ, ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿದ್ದ ಕೆಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಹೇಳಿದರು.
‘ಉದಯಗಿರಿ, ಮಂಡಿಮೊಹಲ್ಲಾ ಮತ್ತು ಲಷ್ಕರ್ ಠಾಣಾ ವ್ಯಾಪ್ತಿಯ 10 ಮೆಡಿಕಲ್ ಶಾಪ್ಗಳಿಗೆ ಗ್ರಾಹಕರ ಸೋಗಿನಲ್ಲಿ ತೆರಳಿದ್ದ ಪೊಲೀಸರು, ವೈದ್ಯರ ಚೀಟಿ ಇಲ್ಲದೆ ಕೆಲ ಔಷಧಿಗಳನ್ನು ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿದರು. ಒಂದು ಮೆಡಿಕಲ್ ಶಾಪ್ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ಔಷಧಿ ದಾಸ್ತಾನು ಇದ್ದುದ್ದು ಪತ್ತೆಯಾಗಿದ್ದು, ಅದರ ನೋಂದಣಿ ರದ್ದುಪಡಿಸುವಂತೆ ಔಷಧ ನಿಯಂತ್ರಕರಿಗೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.
ಸೀಮಾ ಲಾಟ್ಕರ್ ಮೈಸೂರು ನಗರ ಪೊಲೀಸ್ ಆಯುಕ್ತೆಗಾಂಜಾ ಅಥವಾ ಡ್ರಗ್ಸ್ ಮಾರಾಟ ಪ್ರಕರಣಗಳಲ್ಲಿ ಹೆಚ್ಚು ಬಾರಿ ಭಾಗಿಯಾದವರನ್ನು ಗಡೀಪಾರು ಮಾಡುವ ಕುರಿತು ಚಿಂತನೆ ನಡೆದಿದೆ.
