ಕೊರಟಗೆರೆ :- ಗ್ರಾಮ ಪಂಚಾಯಿತಿ ಅನುದಾನ ದುರ್ಬಳಕೆ, ಅಂಗವಿಕಲರ ಮೀಸಲಿಟ್ಟ ಹಣ ಬಳಕೆಯಲ್ಲಿ ಮೀನಾ ಮೇಷ, 15ನೇ ಹಣಕಾಸಿನ ಬಳಕೆಯ ಬಗ್ಗೆ ಮಾಹಿತಿ ಕೊರತೆ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರುಗಳ ನಿರ್ಲಕ್ಷ್ಯದ ವಿರುದ್ಧ 14 ಜನ ಗ್ರಾಮ ಪಂಚಾಯಿತಿ ಸದಸ್ಯರುಗಳು ಗೈರಾಜುರು ಮೂಲಕ ಸಾಮಾನ್ಯ ಸಭೆ ಬಹಿಷ್ಕರಿಸಿದ ಘಟನೆ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜರುಗಿದೆ,
ಕೊರಟಗೆರೆ ತಾಲೂಕಿನ ಸಿ ಎನ್ ದುರ್ಗಾ ಹೋಬಳಿ ತೋವಿನಕೆರೆ ಹೋಬಳಿ ಕೇಂದ್ರದ ಜೊತೆೆಗೆ ವಾಣಿಜ್ಯ ಚಟುವಟಿಕೆಗಳ ಕೇಂದ್ರವಾಗಿದ್ದು, “ಗ್ರೇಡ್ 1” ಪಂಚಾಯಿತಿಯಾಗಿದ್ದು ಅಭಿವೃದ್ಧಿ ವಿಚಾರದಲ್ಲಿ ಗ್ರಾಮ ಪಂಚಾಯತಿ ಸದಸ್ಯರನ್ನು ನಿರ್ಲಕ್ಷ್ಯಿಸಿದ ಅಧ್ಯಕ್ಷರ ಹಾಗೂ ಪಿಡಿಒ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಸ್ಥಳೀಯ ಸರ್ಕಾರ ಎಂದೇ ಬಣ್ಣಿಸುವ ಆಡಳಿತ ವರ್ಗಕ್ಕೆ ಗ್ರಾಮ ಪಂಚಾಯಿತಿಯಲ್ಲಿ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಸಾಮರಸ್ಯ ಕೊರತೆಯಿಂದ ಜೊತೆಗೆ ಅಧ್ಯಕ್ಷರ ಹಾಗೂ ಸದಸ್ಯರ ಸಾಮರಸ್ಯ ಕೊರತೆಯಿಂದ ಅಂಗವಿಕಲರ ಶೇಕಡ 18ರ ಹಣಕಾಸು ಸೇರಿದಂತೆ ಇನ್ನಿತರ ಅನುದಾನ ಬಳಕೆಯಲ್ಲಿ ನಿರ್ಲಕ್ಷ ವಹಿಸಿದರ ವಿರುದ್ಧ 14ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಉಪಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವಧಿಯಲ್ಲಿ ಸಮರ್ಪಕ ಬಳಕೆ ಮಾಡಬೇಕು ಆದರೆ ಗ್ರಾಮೀಣಾಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ನಿರ್ಲಕ್ಷ್ಯದಿಂದ ಬಹಳಷ್ಟು ಅಭಿವೃದ್ಧಿ ಕುಂಠಿತವಾಗಿದ್ದು ಜೊತೆಗೆ ಅಂಗವಿಕಲರ ಬಳಕೆಯಲ್ಲಿ ಹಲವು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಕಿವಿಗೊಳದ ಕಾರಣ ಅನಿವಾರ್ಯವಾಗಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಿಂದ 14 ಜನ ಸದಸ್ಯರು ಬಹಿಷ್ಕಾರ ಹಾಕಿದ್ದೇವೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-ಶ್ರೀನಿವಾಸ್ ಕೊರಟಗೆರೆ
