ಕೊರಟಗೆರೆ:-ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಕಳ್ಳತನ ಹಾಗೂ ವಂಚನೆ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ವಿವಿಧ ಬ್ಯಾಂಕ್ ಸಿಬ್ಬಂದಿಯರೊಂದಿಗೆ ಮಹತ್ವದ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಎಟಿಎಂ ಭದ್ರತೆ ಮತ್ತು ಕಳ್ಳತನಕ್ಕೆ ಮುಂದಾದಾಗ ಅಲಾರಂ ಹಾಗೂ ಮೊಬೈಲ್ ಗೆ ಸಂದೇಶ ಬರುವಂತೆ ಹಾಗೂ ಭದ್ರತಾ ಪಾಲನೆ ಕುರಿತು ಪೊಲೀಸ್ ಇಲಾಖೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಸಭೆಯನ್ನುದ್ದೇಶಿಸಿ ಸಿಪಿಐ ಅನಿಲ್ ಎಟಿಎಂ ಹಾಗೂ ಬ್ಯಾಂಕ್ ಗಳಿಗೆ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು. ಕ್ಯಾಮೆರಾಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ರೆಕಾರ್ಡಿಂಗ್ ವ್ಯವಸ್ಥೆಯನ್ನು ನಿಯಮಿತವಾಗಿ ಪರಿಶೀಲನೆ ಮಾಡಬೇಕು ಎಂದು ಹೇಳಿದರು.
ಬ್ಯಾಂಕ್ ಹಾಗೂ ಎಟಿಎಂ ಗಳಿಗೆ ಬರುವ ಪ್ರತಿಯೊಬ್ಬರ ಚಲನ ವಲನ ಗುರುತಿಸಿ ನಿಗಾವಹಿಸುವುದು ಕಡ್ಡಾಯವಾಗಿ ಮಾಡಬೇಕು ಎಂದರು.
ಸಭೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಾದ ರಾಜಗಿರೀಶ್ ಬಾಬು,ತಿಮ್ಮರಾಜು, ಮಂಜುನಾಥ್ ಹಾಗೂ ಎಸ್ ಬಿ ಐ ಬ್ಯಾಂಕ್ ಕೆಜಿಬಿ ಡಿಸಿಸಿ ಬ್ಯಾಂಕ್ ನ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಬ್ಯಾಂಕ್ನ ಸಿಬ್ಬಂದಿಗಳು ಇದ್ದರು.
– ಶ್ರೀನಿವಾಸ್ ಕೊರಟಗೆರೆ.
