ಕೊರಟಗೆರೆ:- ತಾಲೂಕಿನ ಏಕಲವ್ಯ ಮಾದರಿ ವಸತಿ ಶಾಲೆ ಬಜ್ಜನಹಳ್ಳಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಿದ್ದು , ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.
ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅದರಲ್ಲಿ 50 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 100% ಮತ್ತು ವಾಣಿಜ್ಯ ವಿಭಾಗದಲ್ಲಿ 96% ಶೇಕಡಾವಾರು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ :ಉಷಾ ಬಿ.ಕೆ. 600ಕ್ಕೆ 583 (97.17%) ಅಂಕಗಳನ್ನು ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ಹರ್ಷಿಣಿ ಎ. 572 (95.33%) ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ.ಹಾಗೆಯೇ ವಾಣಿಜ್ಯ ವಿಭಾಗದಲ್ಲಿ ಶಾಂಭವಿ ಕೆ ಎಲ್ ಎಂಬ ವಿದ್ಯಾರ್ಥಿನಿ 563 (93. 83%) ಪ್ರಥಮ ಸ್ಥಾನ, ಮತ್ತು ದ್ವಿತೀಯ ಸ್ಥಾನವನ್ನು ರುಣಿತ ಕೆ 560 (93%) ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಒಟ್ಟಾರೆ ಶಾಲೆಯ ಫಲಿತಾಂಶದಲ್ಲಿ ಒಂಬತ್ತು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಕನ್ನಡ 05, ವ್ಯವಹಾರ ಅಧ್ಯಯನ 03, ಭೌತಶಾಸ್ತ್ರ 01, 100ಕ್ಕೆ 100 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಉತ್ತಮ ಫಲಿತಾಂಶ ಪಡೆದ ಶಾಲೆಗೆ ಗೌರವಾನ್ವಿತ ಡಿಎಲ್ಸಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು, ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಮತ್ತು ಪೋಷಕರು ಎಲ್ಲಾ ಯಶಸ್ವಿ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
