ಕೊರಟಗೆರೆ:- ತಾಲೂಕಿನ ಜೆಕೆ ಮೆಮೋರಿಯಲ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಸಿಬಿಎಸ್ಸಿ ಪಠ್ಯಕ್ರಮದ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಸೋನಾ ಕಾಶಿ 94% ಅಂಕಗಳನ್ನು ಗಳಿಸಿ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಚೇತನ್ ಕುಮಾರ್ 93.2%ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ತನ್ಮಯ್ 90.2 %ಅಂಕಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾರೆ. ಸೈಯದ್ ಹೈಧರ್ 84.6%ನ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ವ್ಯವಸ್ಥಾಪಕರಾದ ಡಾ. ಮಲ್ಲಿಕಾರ್ಜುನ್ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
