ಕೊರಟಗೆರೆ : ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃಧ್ದಿ ಹಾಗೂ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುವ ದೃಷ್ಠಿಯಿಂದ ಒಂದು ಕೋಟಿ ಹಣ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 1.25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಸ್ವಾವಲಂಬನೆಯ ಅತ್ಯುತ್ತಮ ಮಾರ್ಗವಾಗಿದ್ದು ಗ್ರಾಮೀಣ ಪ್ರದೇಶದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವಂತಾಗಬೇಕು ಎಂಬ ಹಿನ್ನಲೆಯಲ್ಲಿ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆಯುವಂತೆ ತಿಳಿಸಿ ಕೊರಟಗೆರೆ ಪ್ರಥಮ ದರ್ಜೇ ಕಾಲೇಜು ತುಮಕೂರು ವಿಶ್ವವಿದ್ಯಾಲಯದ ಸಂಯೋಜನೆಗೆ ಒಳಪಟ್ಟಿದ್ದು ತಾವು ಉನ್ನತ ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ ತುಮಕೂರು ವಿಶ್ವವಿದ್ಯಾಲಯದ ಸ್ಥಾಪನೆ ಮಾಡಿರುವ ಬಗ್ಗೆ ತಿಳಿಸಿದ ಸಚಿವರು ಸದರಿ ಕಾಲೇಜಿನಲ್ಲಿ ಹೆಚ್ಚು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಇದ್ದು ಅವರು ಶೈಕ್ಷಣಿಕ ಅಭಿವೃದ್ದಿಗೆ 1 ಕೋಟಿ ಹಣ ನೀಡುವ ಭರವಸೆ ನೀಡಿ ಕಾಲೇಜಿನ ಕಾರ್ಯನಿವಹಣೆ ಬಗ್ಗ ಮೆಚ್ಚುಗೆ ವ್ಯೆಕ್ತ ಪಡಿಸಿ ಪ್ರತಿಯೊಬ್ಬ ಅಧ್ಯಪಕರುಗಳು ವಿದ್ಯಾರ್ಥಿಗಳ ಶ್ರೇಯೋಬಿವೃಧ್ದಿಗಾಗಿ ಶ್ರಮಿಸಬೇಕು ಹಾಗೂ ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಇದನ್ನು ಓದು: ಕೊರಟಗೆರೆ: ಅಂಗವಿಕಲತೆಯನ್ನು ತಡೆಗಟ್ಟಲು ಐದು ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ- ಟಿಎಚ್ಒ ವಿಜಯ್ಕುಮಾರ್
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ.ಕಾರ್ಯನಿರ್ವಹಣಾದಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ಗೂಟೂರು ಶಿವಪ್ಪ, ತಹಶೀಲ್ದಾರ್ ಮಂಜುನಾಥ್, ಪ್ರಾಂಶುಪಾಲ ಪ್ರೋ.ಈರಪ್ಪನಾಯ್ಕ, ಕಾರ್ಯಪಾಲಕ ಅಭಿಯಂತರ ಆಶಾ ಸೇರಿದಂತೆ ಎಲ್ಲಾ ಕಾಲೇಜಿನ ಸಿಡಿಸಿ ಸದಸ್ಯರು, ಭೋದಕ ಹಾಗೂ ಬೋದಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
– ಶ್ರೀನಿವಾಸ್, ಕೊರಟಗೆರೆ.
