ಕೊರಟಗೆರೆ : ತಾಲ್ಲೂಕಿನ ಕೋಳಾಲ ಹೋಬಳಿಯ ದುಡ್ಡನಹಳ್ಳಿ ಸರ್ಕಾರಿ ಶಾಲೆಗೆ ಸೌಕರ್ಯ ಒದಗಿಸಿದ ಸಿದ್ಧರಬೆಟ್ಟ ರೋಟರಿ ಸಂಸ್ಥೆ.
ಕೊರಟಗೆರೆಯ ಬಾಲಾಜಿ ಟೆಕ್ಟೈ ಟೈಲ್ಸ್ ನ ಮಾಲೀಕರು, ರೋಟರಿ ಸಿದ್ದರಬೆಟ್ಟ ಸಂಸ್ಥೆಯ ಅಧ್ಯಕ್ಷರು ಆದಂತಹ ಶ್ರೀಯುತ ದರ್ಶನ್ ಬಾಲಾಜಿ ಹಾಗೂ ಅವರ ಧರ್ಮ ಪತ್ನಿಯವರಾದ ಶ್ರೀಮತಿ ರೀತು ರವರು ಹಾಗೂ ಕೋಳಾಲ ಆರಕ್ಷಕ ಠಾಣೆಯ ಪಿ ಎಸ್ ಐ ಯೋಗೇಶ್ ರವರು ಮತ್ತು ಯೂಥ್ ಫಾರ್ ಸೇವಾ ಸಂಸ್ಥೆಯ ಇವರುಗಳು ಆಗಮಿಸಿ ರೋಟರಿ ಕ್ಲಬ್ನಿಂದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಸರ್ಕಾರಿ ಶಾಲೆಯ ಮಕ್ಕಳಿಗೆ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ನ್ನು ಯೂಥ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಸರ್ಕಾರಿ ಶಾಲೆಗೆ ಉಚಿತವಾಗಿ ಬ್ಯಾಗ್ ವಿತರಣೆಮಾಡಿದರು.

ರೋಟರಿ ಸಂಸ್ಥೆಗಳ ವತಿಯಿಂದ ಸರಕಾರಿ ಶಾಲೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಈ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಈ ಮೂಲಕ ಸರಕಾರಿ ಶಾಲೆಗಳನ್ನು ಬಲಪಡಿಸಿ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ರೋಟರಿ ಸಂಸ್ಥೆಯ ಅಧ್ಯಕ್ಷರು ದರ್ಶನ್ ಮನವಿ ಮಾಡಿದರು . ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತು ಹೆಣ್ಣು ಮಕ್ಕಳು ಅತಿ ಹೆಚ್ಚು ಓದುವುದರ ಬಗ್ಗೆ ಆಸಕ್ತಿ ಬೆಳೆಯಲೆಂದು ಶಾಲಾ ಮುಖ್ಯ ಶಿಕ್ಷಕರು ತಿಳಿಸಿದರು. ಬ್ಯಾಗ್ ವಿತರಣೆ ಸಂದರ್ಭದಲ್ಲಿ ಅಧ್ಯಕ್ಷರಾದ ದರ್ಶನ್, ಪಿ ಎಸ್ ಐ ಯೋಗೇಶ್ ರವರು. ಕೋಳಾಲ. ಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಉಪಸ್ಥಿತರಿದ್ದರು.
ವರದಿ : ನರಸಿಂಹಯ್ಯ ಹೊಸಕೋಟೆ
