ಕೊರಟಗೆರೆ:- ಕಾಂಗ್ರೆಸ್ ಪಕ್ಷದಲ್ಲಿ ಮತ್ತೋಂದು ಅಘಾತಕಾರಿ ಬೆಳವಣಿಗೆ ನಡೆದಿದೆ. ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಆಕಾಂಕ್ಷಿತ ಅಭ್ಯರ್ಥಿ, ಸಮಾಜ ಸೇವಕ ಎಂಎನ್ಜೆ ಮಂಜುನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೊರಟಗೆರೆಯ ರತ್ನಶ್ರೀ ಖಾಸಗಿ ಹೋಟೆಲ್ನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಪಕ್ಷದ ಸಿದ್ಧಾಂತ ಒಪ್ಪಿ ಅವರು ಜೆಡಿಎಸ್ಗೆ ಸೇರ್ಪಡೆಗೊಂಡರು.

ಈ ಹಿಂದೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಮನೆ ಮಾತಾಗಿದ್ದ ಎಂಎನ್ಜೆ ಮಂಜುನಾಥ್, ಕಾರಣಾಂತರಗಳಿಂದ ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಪಾದಾರ್ಪಣೆ ಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಅವರು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಎಂಎನ್ಜೆ ಮಂಜುನಾಥ್, ರೈತಪರ ಸೇವೆಗೆ ಸದಾಕಾಲವೂ ಮುಂದು. ನಾನು ಸದ್ಯಕ್ಕೆ ಜಿ.ಪಂ ಆಕಾಂಕ್ಷಿತ ಅಭ್ಯರ್ಥಿಯಷ್ಟೇ, ಎಂಎಲ್ಎ ಅಭ್ಯರ್ಥಿಯಲ್ಲ. ಪಕ್ಷದ ಸಿದ್ಧಾಂತ, ಮಾರ್ಗಸೂಚಿಗೆ ಸದಾ ಬದ್ಧನಾಗಿರುತ್ತೇನೆ ಎಂದರು.
ಸಭೆಯಲ್ಲಿ ಜೆಡಿಎಸ್ ಅಧ್ಯಕ್ಷ ಕಾಮರಾಜು, ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ್, ನರಸಿಂಹರಾಜು, ಲಕ್ಷ್ಮಣ್, ಪಿಲ್ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಮಾಜಿ ಪ.ಪಂ ಸದಸ್ಯ ಲಕ್ಷ್ಮೀನಾರಾಯಣ್, ರಮೇಶ್, ಎಲ್.ವಿ. ಪ್ರಕಾಶ್, ಬಸವರಾಜು ಸೇರಿದಂತೆ ಇತರರು ಹಾಜರಿದ್ದರು.
– ಶ್ರೀನಿವಾಸ್ ಕೊರಟಗೆರೆ .
