ಕೊರಟಗೆರೆ:- ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026-27ನೇ ಸಾಲಿನಲ್ಲಿ ಅಕ್ಕಿರಾಂಪುರ ಗ್ರಾಮದಲ್ಲಿ ಕಸ್ತೂರಿಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ ವಿಶೇಷ ಗ್ರಾಮ ಸಭೆ ನಡೆಯಿತು.
ಸಭೆಗೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳಾದ ಅಪೂರ್ವ ಸಿ ಅನಂತರಾಮು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಬಾಲಕಿಯರಿಗೆ ಉತ್ತಮ ಶಿಕ್ಷಣದೊಂದಿಗೆ ಸುರಕ್ಷಿತ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ವಸತಿ ನಿಲಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಸತಿ ನಿಲಯ ಆರಂಭಕ್ಕೆ ಅಗತ್ಯ ಮೂಲಸೌಕರ್ಯ, ವಿದ್ಯಾರ್ಥಿನಿಯರ ದಾಖಲಾತಿ, ಶಿಕ್ಷಣ ಸೌಲಭ್ಯಗಳು ಹಾಗೂ ಇಲಾಖಾತ್ಮಕ ಸಹಕಾರ ಕುರಿತು ಚರ್ಚೆ ನಡೆಯಿತು.ಗ್ರಾಮಸ್ಥರು ಹಾಗೂ ಪೋಷಕರು ಸಹ ಯೋಜನೆಗೆ ಸ್ವಾಗತ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಯಮುನಾ , ಸಹಾಯಕ ನಿರ್ದೇಶಕರು (ಗ್ರಾ.ಉ) ಮಧು ಸೂದನ್ , ತಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಫೈಯರ್ ಬೇಗಮ್ , ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಶಾಲಾ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
