ಕೊರಟಗೆರೆ :– ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಹೋಟೆಲ್ಗೆ ನುಗ್ಗಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಮೃತರನ್ನು ನವೀನ್ (18) ಹಾಗೂ ನಕುಲ್ (17) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಗೌರಿಬಿದನೂರಿನಿಂದ ಮಧುಗಿರಿಯ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಏಕಾಏಕಿ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ವಾಹನ ರಸ್ತೆ ಪಕ್ಕದಲ್ಲಿದ್ದ ಹೋಟೆಲ್ಗೆ ನುಗ್ಗಿದೆ. ಘಟನೆಯ ಸಂದರ್ಭದಲ್ಲಿ ಹೋಟೆಲ್ನೊಳಗಿದ್ದ ಕೆಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ವಾಹನದ ಅತಿವೇಗ ಹಾಗೂ ಅಜಾಗರುಕತೆ ಎಂದು ಸ್ಥಳೀಯ ಸಾರ್ವಜನಿಕರ ಆರೋಪಿಸುತ್ತಾರೆ.
ಸ್ಥಳಕ್ಕೆ ಕೊರಟಗೆರೆ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ಐ ತೀರ್ಥೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
