ಕೊರಟಗೆರೆ:- ಪೋಲಿಯೊದಿಂದ ಉಂಟಾಗುವ ಅಂಗವಿಕಲತೆಯನ್ನು ತಡೆಗಟ್ಟಲು ಐದು ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಟಿಎಚ್ಒ ವಿಜಯ್ಕುಮಾರ್ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ವೈದ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ವತಿಯಿಂದ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘‘ಪಲ್ಸ್ ಪೋಲಿಯೋ’’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ‘ಪೋಲಿಯೋ ಮುಕ್ತ ದೇಶ’ ಎಂದು ಘೋಷಿಸಿದೆ.

ಈ ಮಹತ್ವದ ಅಭಿಯಾನಕ್ಕೆ ಆರೋಗ್ಯ ಇಲಾಖೆ ಒಟ್ಟು 69 ಬೂತ್ಗಳನ್ನು ಸ್ಥಾಪಿಸಿದ್ದು, 5ವರ್ಷದೊಳಗಿನ 10473 ಮಕ್ಕಳನ್ನು ತಲುಪುವ ಗುರಿ ಇಟ್ಟುಕೊಂಡಿದೆ, ಅಭಿಯಾನವು ಡಿ.21ರಿಂದ 24ರವೆರೆಗೆ ನಡೆಯಲಿದೆ, ಪೋಲಿಯೊ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ರೋಟರಿ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಪೋಲಿಯೊ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆಯು ಕಳೆದ 30 ವರ್ಷಗಳಿಂದ ನಿರಂತರ ಶ್ರಮಿಸುತ್ತಾ ಬಂದಿದೆ. 2011ರಲ್ಲಿ ದೇಶದಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿದ್ದು ನಂತರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ, ಆದರೂ ನೆರೆಯ ರಾಷ್ಟ್ರ ಗಳಾದ ಪಾಕಿಸ್ತಾನ ಮತ್ತು ಅಫ್ಗಾನಿಸ್ಥಾನದಲ್ಲಿ ಕೆಲವು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರತಿ ವರ್ಷ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬಿಆರ್ಸಿ ಕಚೇರಿಯ ಮಂಜುನಾಥ್ ಮಾತನಾಡಿ, ಪೋಲಿಯೋ ನಿರ್ಮೂಲನೆ ಎನ್ನುವುದು ಸರ್ಕಾರದ ಹೊಣೆ ಮಾತ್ರವಲ್ಲ, ಇದು ಸಮಾಜದ ಪ್ರತಿಯೊಬ್ಬ ನಾಗರೀಕನ ಜವಬ್ದಾರಿ ಎಂದು ತಿಳಿಸಿದರು.

ಈ ಅಭಿಯಾನದ ವೇಳೆ ನರಸಿಂಹಮೂರ್ತಿ, ಮಲ್ಲೇಶಯ್ಯ, ಲಕ್ಷಮ್ಮ ಹಾಜರಿದ್ದರು.
– ಶ್ರೀನಿವಾಸ್, ಕೊರಟಗೆರೆ.

[…] ಇದನ್ನು ಓದಿ: ಕೊರಟಗೆರೆ: ಅಂಗವಿಕಲತೆಯನ್ನು ತಡೆಗಟ್ಟಲು ಐದು ವರ್ಷದ ಒ… […]
[…] ಇದನ್ನು ಓದು: ಕೊರಟಗೆರೆ: ಅಂಗವಿಕಲತೆಯನ್ನು ತಡೆಗಟ್ಟಲು ಐ… […]