ಕೊರಟಗೆರೆ – ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೊಮ್ಮಲದೇವಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತ್ರಿಗೋಶ್ ಚಾರಿಟಬಲ್ ಟ್ರಸ್ಟ್ ವತಿಯಿಂದ 55ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತಟ್ಟೆ–ಲೋಟಗಳು, ವಿದ್ಯಾಭ್ಯಾಸಕ್ಕೆ ಅಗತ್ಯವಾದ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾಸ್ಟರ್ ನ್ಯೂಸ್ ಕನ್ನಡ ಚಾನಲ್ ವತಿಯಿಂದ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕಮರ್ಷಿಯಲ್ ವಾಟರ್ ಫಿಲ್ಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಸರ್ಕಾರಿ ಶಾಲೆಗಳನ್ನು ಉಳಿಸಿ, ಸರ್ಕಾರಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತ್ರಿಗೋಶ್ ಚಾರಿಟಬಲ್ ಟ್ರಸ್ಟ್ ಕಾರ್ಯನಿರತವಾಗಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಪಣತೊಟ್ಟಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ವಿವಿಧ ಶಾಲೆಗಳಿಗೆ ಟೀ-ಶರ್ಟ್, ಪೀಠೋಪಕರಣಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುತ್ತಾ ಬರುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಟ್ರಸ್ಟ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ತ್ರಿಗೋಶ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲೆಯ SDMC ಅಧ್ಯಕ್ಷರು, ಶಿಕ್ಷಕರು, ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಮಾಸ್ಟರ್ ನ್ಯೂಸ್ ಸಂಸ್ಥಾಪಕರಾದ ವೀರು ಪಾಟೀಲ್ ಅವರು ಉಪಸ್ಥಿತರಿದ್ದರು.