
ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ರಾಜ್ಯ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಕೆಳಕಂಡ ಸುಧಾರಣೆಗಳನ್ನು ತರಲು ಉದ್ದೇಶಿಸಿದ್ದೇವೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.