ಕೆ ಆರ್ ಪೇಟೆ: ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಗುರುತಿಸಿ ಸನ್ಮಾನಿಸುವುದರಿಂದ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪ್ರೋತ್ಸಾಹಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸುತ್ತಿರುವುದು ಶ್ಲಾಘನೀಯವಾದುದು ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.
ಅವರು ಪಟ್ಟಣದ ಸುಲೋಚನಮ್ಮ- ರಾಮದಾಸ್ ಸಭಾಂಗಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದರು.
ಪ್ರತಿಭೆ’ ಎಂದರೆ ಹುಟ್ಟಿನಿಂದಲೇ ಬರುವ ವಿಶೇಷ ಕೌಶಲ್ಯ ಅಥವಾ ಕಲಿಕೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಆದರೆ, ಅದನ್ನು ಸೂಕ್ತ ಸಮಯದಲ್ಲಿ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ‘ಪ್ರತಿಭಾ ಪುರಸ್ಕಾರ’ವು ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಇದು ಬೆನ್ನೆಲುಬಾಗಿ ನಿಲ್ಲುತ್ತದೆ. ಪ್ರತಿಭೆಯನ್ನು ಗುರುತಿಸಲು ಶಿಕ್ಷಕರಿಂದ ಮಾತ್ರ ಸಾಧ್ಯವಾಗುತ್ತದೆ. ಹಾಗಾಗಿ ಶಿಕ್ಷಕರು ವಿದ್ಯಾರ್ಥಿಯಲ್ಲಿ ಯಾವ ಪ್ರತಿಭೆ ಇದೆ ಎಂಬುದನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟರೆ ಆ ವಿದ್ಯಾರ್ಥಿ ಹೆಚ್ಚಿನ ಸಾಧನೆ ಮಾಡಲು ಅವಕಾಶವಾಗುತ್ತದೆ. ಜೊತೆಗೆ ಪೋಷಕರೂ ಸಹ ತಮ್ಮ ಮಕ್ಕಳು ಹೊಂದಿರುವ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಪಡೆದುಕೊಳ್ಳಲು ಸಹಕಾರ ನೀಡಬೇಕು.
ಇಂತಹುದೇ ಓದಬೇಕು ಎಂದು ಒತ್ತಡ ಏರಬಾರದು, ತಮ್ಮ ಮಕ್ಕಳು ಯಾವ ಕೋರ್ಸು ಆಯ್ಕೆ ಮಾಡಿಕೊಳ್ಳುತ್ತಾರೋ ಅದಕ್ಕೆ ಸೂಕ್ತ ಸಹಕಾರ ನೀಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುವ ಆಸಕ್ತಿ ಇರುವ ವಿದ್ಯಾರ್ಥಿಗೆ ಮೆಡಿಕಲ್ ಓದಲೇಬೇಕು ಎಂದು ಒತ್ತಡ ಏರುವುದು ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಪೋಷಕರಿಗೆ ಶಾಸಕರು ಸಲಹೆ ನೀಡಿದರು.

ಬೇಬಿಬೆಟ್ಟದ ಶ್ರೀ ಕ್ಷೇತ್ರ ರಾಮಯೋಗೀಶ್ವರ ಮಠದ ಪೀಠಾಧಿಪತಿ ಶ್ರೀ ಶಿವಬಸವ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚೆನ್ನವೀರ ಸ್ವಾಮೀಜಿ, ಮಲೆಮಹದೇಶ್ಚರ ಬೆಟ್ಟದ ಶ್ರೀ ಬಸಪ್ಪ ಗುರುಗಳು, ಬೆಡದಹಳಸುಕ್ಷೇತ್ರದಶ್ರೀ ಪೀಠಾಧ್ಯಕ್ಷರಾಷ ಶ್ರೀ ರುದ್ರಮುನಿ ಸ್ವಾಮೀಜಿಯವರು ದಿವ್ಯಸಾನಿಧ್ಯ. ವಹಿಸಿ ಆಶೀರ್ವಚನ ನೀಡಿದರು.
ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಾರೇನಹಳ್ಳಿ ಸುಬ್ರಹ್ಮಣ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸೋಮಶೇಖರ್, ಉದ್ಯಮಿ ಬೂಕಹಳ್ಳಿ ಬಿ.ಸಿ.ಮಂಜು, ,ಪಾಂಡವ ಪುರ ಉಪವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್, ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಸುಜೇಂದ್ರಕುಮಾರ್ ಉದ್ಯಮಿ ಬಿ ಸಿ.ಮಂಜು, ಡಾ.ಯತೀಶ್, ಆರ್ ಟಿ ಓ ಮಲ್ಲಿಕಾರ್ಜುನ್ ಆಪ್ತ ಸಹಾಯಕ ಗಂಜಿಗೆರೆ ಮಹೇಶ್, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಜಿಲ್ಲಾ ವೀರಶೈವ ಮಹಾಸಭಾ ಉಪಾಧ್ಯಕ್ಷ ಎಲ್.ಐ.ಸಿ ಶಿವಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ವಿಜಯ್ ಕುಮಾರ್, ಎಸ್ ಸಿ ಚನ್ನರಾಜು, ಪ್ರಧಾನ ಕಾರ್ಯದರ್ಶಿ ಎಂ ಸಿ ಲೋಕೇಶ್, ಖಜಾಂಚಿ ಮಹೇಶ್, ಪಿ ಬಿ ಮಂಜುನಾಥ್,ಬಸವರಾಜು, ಕಾಂತರಾಜು ಪಾಲಾಕ್ಷ,ಲೋಕೇಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಧ್ಯಮಿಗಳಾದ ಮೋದೂರು ಮಂಜುನಾಥ್, ಕೆ.ಎಸ್.ರಾಜೇಶ್, ಮಾತೃಭೂಮಿ ವೃದ್ದಾಶ್ರಮದ ಜೈಹಿಂದ್ ನಾಗಣ್ಣ ಮತ್ತಿತರ ಸಾಧಕರು ಹಾಗೂ ಎಸ್.ಎಸ್. ಎಲ್.ಸಿ, ಪಿಯುಸಿಯಲ್ಲಿ ಅತ್ಯಥಿಕ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
– ಶ್ರೀನಿವಾಸ್ ಆರ್.
