ಕೆ.ಆರ್.ಪೇಟೆ: ಪಟ್ಟಣದ ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಪುರಸಭೆ ಉಪಾಧ್ಯಕ್ಷೆ ಭಾಗ್ಯಮ್ಮ (70) ಉರುಫ್ ಬಂಗಾರಮ್ಮ ಅವರು ಅನಾರೋಗ್ಯದಿಂದ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರ ಬುಧವಾರ ಮಧ್ಯಾಹ್ನ 12 ಗಂಟೆಗೆ ಗುಡ್ಡೇನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಭಾಗ್ಯಮ್ಮ ಅವರ ನಿಧನಕ್ಕೆ ಕೆ.ಆರ್.ಪೇಟೆ ತಾಲ್ಲೂಕಿನ ವಿವಿಧ ಗಣ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಆರ್.
