ಕೆ ಆರ್ ಪೇಟೆ: ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯರಿಗೂ ಮಹತ್ವದ ದಿನ,ಪ್ರತಿಯೊಬ್ಬರು ಕೂಡ ಹೆಮ್ಮೆಪಡಬೇಕೆಂದು ಶಾಸಕ ಹೆಚ್.ಟಿ ಮಂಜು ಹೇಳಿದರು.
ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಆವರಣ ನಡೆದ 77ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜ.26 ಸಂವಿಧಾನ ಸಮರ್ಪಣೆ ದಿನವಾಗಿದ್ದು ಭಾರತದ ಸಂವಿಧಾನದಿಂದ ದೇಶದೆಲ್ಲೆಡೆ ಜನರು ಶಾಂತಿ, ಸಹಬಾಳ್ವೆ ಜೀವನ ನಡೆಸುತ್ತಿದ್ದಾರೆ. ದೇಶದಲ್ಲಿ ಸ್ವಾತಂತ್ಯ್ಯ ಮತ್ತು ಸಮಾನವಾಗಿ ಬದುಕುವ ಹಕ್ಕನ್ನು ಭಾರತ ಸಂವಿಧಾನ ನೀಡಿದೆ.ದೇಶದ ಪ್ರತಿಯೊಬ್ಬರೂ ಕೂಡ ಸಂವಿಧಾನ ಗೌರವಿಸುವ ಕೆಲಸ ಮಾಡಬೇಕು.ಕಟ್ಟುವೆವು ನಾವು ಹೊಸ ನಾಡೊಂದನು ರಸದ ಬೀಡೊಂದನು ಎಂಬ ಕವಿವಾಣಿಯಂತೆ ದೇಶವನ್ನು ಕಟ್ಟಬೇಕಾಗಿದೆ ಎಂದ ಅವರು ತಾಲ್ಲೂಕು ವಿವಿಧ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕೆಲ ಅಧಿಕಾರಿಗಳು ತೊಂದರೆ ಕೊಡುವುದು ನನ್ನ ಗಮನಕ್ಕೆ ಬಂದಿದೆ ನಾನು ಕೂಡ ರೈತ ಸಂಘಟನೆ ಮೂಲಕ ರಾಜಕೀಯಕ್ಕೆ ಬಂದಿದ್ದು ನಮಗೂ ಪ್ರಗತಿಪರ ಸಂಘಟನೆಗಳ ಮೇಲೆ ತುಂಬಾ ಗೌರವ ಇದೆ ಆದರೆ ಸಂಘಟನೆ ಹೆಸರಿನಲ್ಲಿ ಕೆಲ ವ್ಯಕ್ತಿಗಳು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸುವುದು ಸರಿಯಲ್ಲ ಎಂದ ಅವರು.ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಇದ್ದ ಕೆಲ ಗೌರವಾನ್ವಿತ ಮಾಜಿ ರಾಜ್ಯಪಾಲರುಗಳು ಉದಾಹರಣೆಗಳಿವೆ.ಆಗಲೂ ಸಹ ಅವರನ್ನು ಭಾಷಣದ ಬಳಿಕ ಸದನದ ಸಂಪ್ರದಾಯಂದತೆ ರಾಷ್ಟ್ರಗೀತೆ ಹಾಡಿ ಗೌರವಯುತವಾಗಿ ಬೀಳ್ಕೊಡಲಾಗಿತ್ತು.ಆದರೆ ಇಂದು ರಾಜ್ಯಪಾಲರು ಭಾಷಣ ಮಂಡಿಸಿದ ನಂತರ ರಾಷ್ಟ್ರಗೀತೆಯನ್ನೂ ನುಡಿಸಲಿಲ್ಲ ಮತ್ತು ರಾಜ್ಯಪಾಲರನ್ನು ಗೌರವಯುತವಾಗಿ ಬೀಳ್ಕೊಡಲೂ ಇಲ್ಲ. ಇದು ಸಂವಿಧಾನ, ರಾಜ್ಯಪಾಲರ ಹುದ್ದೆಗೆ ಮಾಡಿರುವ ಘೋರ ಅಪಮಾನ ಶಾಸಕ ಹೆಚ್ ಟಿ ಮಂಜು ಹೇಳಿದರು.

ಬಳಿಕ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಐಪನಹಳ್ಳಿ ನಾಗೇಂದ್ರ ಕುಮಾರ್ ದೇಶದ ಪ್ರತಿಯೊಬ್ಬ ಪ್ರಜೆಯೂ ಸಮಾನವಾಗಿ ಬದುಕುವ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಇದೇ ಆಶಯಗಳೊಂದಿಗೆ ದೇಶ ಕೂಡ ಮುನ್ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರು ಸಂವಿಧಾನವನ್ನು ಗೌರವಿಸಬೇಕು ಎಂದರು.
ಪಟ್ಟಣದ ಕೆಪಿಎಸ್ ಶಾಲೆ ಆವರಣದಿಂದ ತಾಲೂಕು ಕ್ರೀಡಾಂಗಣದವರೆಗೆ ವಿವಿಧ ಸಂಸ್ಕೃತಿಕ ಕಲಾ ತಂಡಗಳು ಹಾಗೂ ಶಾಲಾ ಮಕ್ಕಳಿಂದ ಮಹಾತ್ಮ ಗಾಂಧೀಜಿ, ಡಾ: ಬಿ.ಆರ್ ಅಂಬೇಡ್ಕರ್ ಭಾವಚಿತ್ರಗಳನ್ನು ಅದ್ದೂರಿ ಮೆರವಣಿಗೆ ಮೂಲಕ ಕರೆತರಲಾಯಿತು.
ಉತ್ತಮ ಕಾರ್ಯನಿರ್ವಹಿಸುವ ಕಸಬಾ ಜ್ಞಾನೇಶ್,ಪೊಲೀಸ್ ಸಿಬ್ಬಂದಿ ಜಯವರ್ದನ್,ಪಿ.ಡಿ.ಓ ನೂತನ್,ವಿ.ಎ ಮಲ್ಲಿಕಾರ್ಜುನ್ ಅವರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೇಶಭಕ್ತಿಯನ್ನು ಸಾರುವ ಗೀತೆಗಳು ನೋಡುಗರ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಕೈಮಗ್ಗ ನಿಗಮ ಮಂಡಳಿಯ ಅಧ್ಯಕ್ಷ ನಾಗೇಂದ್ರ ಕುಮಾರ್,ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ತಾ.ಪಂ ಇಓ ಸುಷ್ಮ,ಬಿಇಓ ತಿಮ್ಮೇಗೌಡ,ನೀರಾವರಿ ಇಲಾಖೆಯ ಚದ್ರೇಗೌಡ,ತಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್ ಆನಂದ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಧರ್ಮೇಂದ್ರ, ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್. ಅರಕ್ಷಕ ನಿರೀಕ್ಚಕರಾದ ಆನಂದೇಗೌಡ,ಸುಮಾರಾಣಿ, ಕೆಪಿಎಸ್ ಶಾಲಾ ಉಪಾದ್ಯಕ್ಷ ಚೇತನ್,ಬಿಸಿಎಂ ಅಧಿಕಾರಿ ವೆಂಕಟೇಶ್,ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಟಿಹೆಚ್ಓ ಡಾ.ಅಜಿತ್ , ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸೋಮಶೇಖರ, ಎ ಡಿ ಎಲ್ ಆರ್. ಸಿದ್ದಯ್ಯ, ಸೇರಿದಂತೆ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಇದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
