ಕೆ.ಆರ್.ಪೇಟೆ,ನ.22: ತಾಲ್ಲೂಕಿನ ಬೂಕನಕೆರೆ ಹೋಬಳಿ ಮಟ್ಟದ ಪ್ರೌಢಶಾಲಾ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಬಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ತಾಲ್ಲೂಕು ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಎಂ.ಎಸ್.ಸುರೇಶ್ ಅವರು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಸಹಕಾರಿಯಾಗಿದೆ.
ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಹೊರತರಲು ಪ್ರತಿಭಾ ಕಾರಂಜಿ, ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಸೂಕ್ತ ವೇದಿಕೆಗಳಾಗಿವೆ. ಸಾರ್ವಜನಿಕವಾಗಿ ಮಾತನಾಡುವುದು ಸುಲಭ. ಅದೇ ವೇದಿಕೆಯ ಮೇಲೆ ನಿಂತು ಮಾತನಾಡುವುದು ಪ್ರತಿಭೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲಿ ಭಾಗವಹಿಸುವುದರಿಂದ ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ. ಕಲೆ–ಸಂಸ್ಕೃತಿಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ನಡುವೆ ಆರೋಗ್ಯಕರ ಸ್ಪರ್ಧೆಯನ್ನು ಪ್ರೋತ್ಸಾಹಿಸುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸುವುದಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮುಖ್ಯ ವೇದಿಕೆಯಾಗಿದೆ ಎಂದರು.

ಕಲೆ ಸಾಹಿತ್ಯ ಸಂಗೀತ ನೃತ್ಯ ಗಾಯನ ಇವು ಕಲಾ ಪ್ರಕಾರಗಳಾಗಿದ್ದು, ಪ್ರತಿಯೊಬ್ಬರನ್ನೂ ಆಕರ್ಷಿಸುತ್ತವೆ. ಆದರೆ ಕೆಲವರಲ್ಲಿ ಈ ಮಾತ್ರ ಕಲಾ ಪ್ರತಿಭೆ ಮೈಗೂಡಿರುತ್ತದೆ. ಶಾಲಾ ಶಿಕ್ಷಣ ಇಲಾಖೆಯು ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜಾರಿಗೆ ತಂದಿರುವುದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್ ಹೇಳಿದರು.
ಕಾರ್ಯಕ್ರಮದಲ್ಲಿ ಬಲ್ಲೇನಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಣ್ಣ, ಎಸ್.ಡಿ.ಎಂ.ಸಿ ಅಧ್ಯಕ್ಷ ಮನು, ಆರ್.ಪಿ.ನಂದೀಶ್, ನಾಗೇಂದ್ರ, ಮಹೇಶ್ಕುಮಾರ್ ಹಾಗೂ ಶಿಕ್ಷಕರು ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆ ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ ಪ್ರತಿಭಾ ಕಾರ್ಯಕ್ರಮಗಳು ಗಮನ ಸೆಳೆದವು.
– ಶ್ರೀನಿವಾಸ್ ಆರ್.

[…] […]