ಕೆ.ಆರ್.ಪೇಟೆ:ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಅಲಂಬಾಡಿ ಕಾವಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅತಿಕ್ ಅಹಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾದ ಗುಡುಗನಹಳ್ಳಿ ಜಿ.ಜೆ ವೆಂಕಟೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು.ಅಧ್ಯಕ್ಷ ಸ್ಥಾನ ಬಯಸಿ ಅತಿಕ್ ಅಹಮದ್ ಹೊರತು ಬೇರೆ ಯಾರೂ ಸಹ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆಯಿತು.
ಚುನಾವಣಾಧಿಕಾರಿಯಾಗಿ ತಾಲ್ಲೂಕು ಪಶು ಇಲಾಖೆ ಸಹಾಯ ನಿರ್ದೇಶಕ ದೇವರಾಜು,ಸಹ ಚುನಾವಣಾಧಿಕಾರಿಯಾಗಿ ಗ್ರಾ.ಪಂ ಪಿಡಿಓ ಶಿವಕುಮಾರ್ ಕಾರ್ಯನಿರ್ವಹಿಸಿದರು.

ನೂತನ ಅಧ್ಯಕ್ಷ ಅತಿಕ್ ಅಹಮದ್ ಮಾತನಾಡಿ ಎಲ್ಲಾ ಸದಸ್ಯರು ಹಾಗೂ ಮುಖಂಡರು ನನ್ನನ್ನು ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡಿರುವುದಕ್ಕೆ ಎಲ್ಲರಿಗೂ ಕೃತಜ್ಞತೆಗಳನ್ನು ತಿಳಿಸುತ್ತೇನೆ.
ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲಾ ಸದಸ್ಯರು ಹಾಗೂ ನೌಕರರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಪಂಚಾಯಿತಿಯ ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ. ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿತ್ತೇನೆ ಎಂದು ಭರವಸೆ ನೀಡಿದರು.
ಇದನ್ನು ಓದಿ: ಕೆ.ಆರ್.ಪೇಟೆ: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಶೂ ಎಸೆದ ಘಟನೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
ಬಳಿಕ ಮಾತನಾಡಿದ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಎ.ರಾಜು ನಮ್ಮ ಅಲಂಬಾಡಿ ಕಾವಲು ಗ್ರಾಮ ಪಂಚಾಯಿತಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ ಹಾಗಾಗಿ ಪಕ್ಷ ಬೇಧ ಧರ್ಮ ಮರೆತು ಅತಿಕ್ ಅಹಮದ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಸಹಕಾರ ನೀಡಿದ್ದೇವೆ ಅದಕ್ಕೆ ಋಣಿಯಾಗಿ ಸಿಕ್ಕ ಕಾಲಾವಧಿಯಲ್ಲಿ ನಮ್ಮೆಲ್ಲ ಸದಸ್ಯರ ಸಲಹೆ ತೆಗೆದುಕೊಂಡು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ಶ್ರಮವಹಿಸಬೇಕು ಎಂದು ಸಲಹೆ ನೀಡಿದರು
ನೂತನವಾಗಿ ಅಧ್ಯಕ್ಷರಾಗಿ ಅತೀಕ್ ಅಹಮದ್ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಬೆಂಬಲಿಗರು ಕಾರ್ಯಕರ್ತರು ಅಭಿನಂದಿಸಿ ಪಟಾಕಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಜಿ.ಎ. ರಾಯಪ್ಪ,ಅಲ್ತಾಫ್ ಸಾಬ್, ಮಾವಿನಕೆರೆ ಧರ್ಮ, ಬಸವರಾಜ್,ಎನ್ ಶಿವಣ್ಣ,ಬೋರಲಿಂಗೇಗೌಡ, ತನ್ವಿರ್ ಪಾಷ, ರಘುನಾಥ್, ಅನಿಲ್ ಕುಮಾರ್, ಶ್ರೀಕಾಂತ್, ಮಹಮದ್ ಗೌಸ್, ಖಾಸಿಂ, ಆಕ್ರಂಪಾಷ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಸಿ.ಶ್ರೀನಿವಾಸ್, ಗ್ರಾ.ಪಂ ಸದಸ್ಯರಾದ ಎ.ರಾಜು, ಕರೀಶೆಟ್ಟಿ, ಭಾಗ್ಯಮ್ಮ, ಜಿ.ಜೆ ವೆಂಕಟೇಶ್, ಶ್ರೀನಿವಾಸ್, ಚಂದ್ರಕಲಾ, ನಾಗೇಶ್, ಮುಜಾಹಿದ್, ವೇದಾಂಬ, ರೂಪ, ಸಾಕಮ್ಮ, ಸೇರಿದಂತೆ ನೂರಾರು ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
- ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
