ಕೆ.ಆರ್.ಪೇಟೆ.ತಾಲ್ಲೂಕಿನ ಆಲಂಬಾಡಿ ಕಾವಲು ಗ್ರಾಮದ ಹಿರಿಯ ಮುಖಂಡರು ಹಾಗೂ ಕೆ.ಆರ್.ಪೇಟೆ ತಾಲ್ಲೂಕಿನ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರ ಹಿರಿಯ ಸಹೋದರರಾದ ಆಲಂಬಾಡಿ ಕಾವಲು ವಿಷಕಂಠೇಗೌಡ(85) ವಯೋಸಹಜ ಕಾಯಿಲೆಯಿಂದ ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ ರಾಜಮ್ಮ ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ತುಂಬಿದ ಬಳಗವನ್ನು ಬಿಟ್ಟು ಅಗಲಿದ್ದಾರೆ ಮೃತರ ಅಂತ್ಯಸಂಸ್ಕಾರವು ಇಂದು ಸಂಜೆ 4:00ಗೆ ಸ್ವಗ್ರಾಮದಲ್ಲಿರುವ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸುವೆ.
ಮೃತರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯರು ಮಾಜಿ ಸಚಿವರಾದ ಹೆಚ್.ವಿಶ್ವನಾಥ್,ಕೆ.ಆರ್.ಪೇಟೆ ಶಾಸಕ ಹೆಚ್.ಟಿ ಮಂಜು, ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ರವಿ ಶಂಕರ್,ಮಾಜಿ ಸಚಿವ ಕೆ.ಸಿ. ನಾರಾಯಣಗೌಡ,ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್,ಟಿ.ಎ.ಪಿ.ಸಿ.ಎಂ.ಎಸ್ ಮಾಜಿ ಅಧ್ಯಕ್ಷ ಬಿ.ಎಲ್,ದೇವರಾಜು,ಕೈ ಮಗ್ಗ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಐಪನಹಳ್ಳಿ ನಾಗೇಂದ್ರ ಕುಮಾರ್,ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಡಾಲು ರವಿ, ಎಂ.ಬಿ ಹರೀಶ್, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ,ಜೆಡಿಎಸ್ ಅಧ್ಯಕ್ಷ ಜಾನಕಿರಾಮ್,ಕೆ.ಪಿ.ಸಿ.ಸಿ ಸದಸ್ಯ ಕಿಕ್ಕೇರಿ ಸುರೇಶ್, ಜಿ.ಪಂ ಮಾಜಿ ಉಪಾಧ್ಯಕ್ಷ ಕೆ.ಎಸ್ ಪ್ರಭಾಕರ್,ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ,ಜೆಡಿಎಸ್ ರಾಜ್ಯ ಯುವ ಘಟಕದ ಕುರುಬಹಳ್ಳಿ ನಾಗೇಶ್, ರಾಜ್ಯ ಜೆಡಿಎಸ್ ಸದಸ್ಯ ಅಕ್ಕಿಹೆಬ್ಬಾಳು ರಘು,ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಿ.ಎಂ ಕಿರಣ್, ಸೇರಿದಂತೆ ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳ ಜೊತೆಗೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಗಣ್ಯರು ಆಲಂಬಾಡಿ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಹಿತಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
