
ಬೆಂಗಳೂರು: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಮಾರ್ಚ್ 1 ರಿಂದ 8 ರವರೆಗೆ ನಡೆಯಲಿದ್ದು, ಅಧಿಕೃತ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ಸಾಧು ಕೋಕಿಲ, ರಿಜಿಸ್ಟ್ರಾರ್ ಹಿಮಂತರಾಜು ಜಿ, ಕಲಾತ್ಮಕ ನಿರ್ದೇಶಕ ಎನ್. ವಿದ್ಯಾಶಂಕರ್ ಉಪಸ್ಥಿತರಿದ್ದರು.